ನವದೆಹಲಿ: ಖಾಸಗಿ ಭಾಗವಹಿಸುವಿಕೆಗಾಗಿ ಭಾರತದ ಬಾಹ್ಯಾಕಾಶ ಕ್ಷೇತ್ರವನ್ನು ತೆರೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 11ರಂದು ಭಾರತೀಯ ಬಾಹ್ಯಾಕಾಶ ಸಂಘ (ಇಂಡಿಯನ್ ಸ್ಪೇಸ್ ಅಸೋಸಿಯೇಷನ್)ವನ್ನು ಉದ್ಘಾಟಿಸಲಿದ್ದಾರೆ.
ವರ್ಚುವಲ್ ಕಾರ್ಯಕ್ರಮದ ಮೂಲಕ ಭಾರತೀಯ ಬಾಹ್ಯಾಕಾಶ ಸಂಘದ ಉದ್ಘಾಟನೆಯನ್ನು ಪ್ರಧಾನಮಂತ್ರಿ ಮೋದಿ ಅವರು ಮಾಡಲಿದ್ದಾರೆ. ಈ ಸಂಘದ ಸ್ಥಾಪಕ ಸದಸ್ಯರಾಗಿ ಭಾರತಿ ಏರ್ಟೆಲ್, ಲಾರ್ಸೆನ್ ಮತ್ತು ಟೂಬ್ರೊ, ನೆಲ್ಕೋ (ಟಾಟಾ ಗ್ರೂಪ್), ಒನ್ವೆಬ್, ಮ್ಯಾಪ್ಮಿಂಡಿಯಾ, ವಾಲ್ಚಂದನಗರ್ ಇಂಡಸ್ಟ್ರೀಸ್, ಅನಂತ್ ಟೆಕ್ನಾಲಜಿ ಲಿಮಿಟೆಡ್ ಅನ್ನು ಹೊಂದಿರುತ್ತದೆ.
ಅದಲ್ಲದೆ, ಗೋದ್ರೆಜ್, ಹ್ಯೂಸ್ ಇಂಡಿಯಾ, ಅಜಿಸ್ಟಾ-ಬಿಎಸ್ಟಿ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಬಿಇಎಲ್, ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಮ್ಯಾಕ್ಸರ್ ಇಂಡಿಯಾ ಮುಂತಾದ ಕಂಪನಿಗಳು ಭಾರತೀಯ ಬಾಹ್ಯಾಕಾಶ ಸಂಘದ ಪ್ರಮುಖ ಸದಸ್ಯರಾಗಿರುತ್ತದೆ.
ಡಿಫೆನ್ಸ್ ಎಲ್ & ಟಿ-ಎನ್ಎಕ್ಸ್ಟಿ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಯಂತ್ ಪಾಟೀಲ್ ಇದರ ಮೊದಲ ಅಧ್ಯಕ್ಷರಾಗಿರುತ್ತಾರೆ. ಭಾರತಿ ಏರ್ಟೆಲ್ನ ಮುಖ್ಯ ನಿಯಂತ್ರಕ ಅಧಿಕಾರಿ ರಾಹುಲ್ ವಾಟ್ಸ್ ಉಪಾಧ್ಯಕ್ಷರಾಗಿರುತ್ತಾರೆ.
ಬಾಹ್ಯಾಕಾಶ ಮತ್ತು ಉಪಗ್ರಹ ತಂತ್ರಜ್ಞಾನಗಳಲ್ಲಿ ಸುಧಾರಿತ ಸಾಮರ್ಥ್ಯಗಳನ್ನು ಹೊಂದಿರುವ ಸ್ವದೇಶಿ ಮತ್ತು ಜಾಗತಿಕ ನಿಗಮಗಳನ್ನು ಹೊಂದಿರುವ ಭಾರತೀಯ ಬಾಹ್ಯಾಕಾಶ ಸಂಘವು ದೇಶದಲ್ಲಿ ಸುಧಾರಿತ ವೈಜ್ಞಾನಿಕ ಮತ್ತು ಸಂಶೋಧನಾ ಕಾರ್ಯಗಳನ್ನು ಕೈಗೊಳ್ಳಲು ದೃಢವಾದ ಬಾಹ್ಯಾಕಾಶ ತಂತ್ರಜ್ಞಾನ ಪರಿಸರ ವ್ಯವಸ್ಥೆಯನ್ನು ಸುಗಮಗೊಳಿಸುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.