ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಕಾನ್ಸ್ಟೇಬಲ್, ಎಸ್ಐ ನೇಮಕಾತಿಗಳನ್ನು ಪಾರದರ್ಶಕವಾಗಿ ನಡೆಸಲಾಗುತ್ತದೆ. ನಿಯಮಗಳ ಅನುಸಾರವೇ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿಗಳು, ಪೋಷಕರು ವದಂತಿಗಳಿಗೆ ಕಿವಿಕೊಡಬೇಡಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಅಭ್ಯರ್ಥಿಗಳಿಂದ ಹಣ ಪಡೆದು ಕೆಲಸ ಕೊಡಿಸುವುದಾಗಿ ಹೇಳಿ, ವಂಚನೆ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿವೆ. ಇಂತಹ ಯಾವುದೇ ಆಮಿಷಗಳಿಗೆ ಅಭ್ಯರ್ಥಿಗಳು ಬಲಿಯಾಗಬಾರದು ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 947 ಸಬ್ ಇನ್ಸ್ಪೆಕ್ಟರ್, 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ನಡೆದಿವೆ, ನಡೆಯುತ್ತಿವೆ. ಇದರಲ್ಲಿ ದಾಖಲಾದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಯಾರಾದರೂ ಆಮಿಷ ಒಡ್ಡಿದಲ್ಲಿ ಪೊಲೀಸರಿಗೆ ತಿಳಿಸುವಂತೆ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.