ಬೆಂಗಳೂರು: ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ ಪೂರೈಕೆ ಮಾಡುತ್ತಿರುವ 10 ರೇಕ್ ಕಲ್ಲಿದ್ದಲು ಪ್ರಮಾಣವನ್ನು 14 ರೇಕ್ಗಳಿಗೆ ಏರಿಕೆ ಮಾಡಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಮ್ಮತಿ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ನವದೆಹಲಿ ಪ್ರವಾಸಿ ರಾಜ್ಯಕ್ಕೆ ಆಗಮಿಸಿರುವ ಅವರು, ಹಲವು ಕಾರಣಗಳಿಂದ ಕಲ್ಲಿದ್ದಲು ಕೊರತೆ ಇಡೀ ಜಗತ್ತನ್ನೇ ಕಾಡುವಂತಾಗಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಕಲ್ಲಿದ್ದಲು ಸಂಗ್ರಹ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾಗಿ ಅವರು ಹೇಳಿದ್ದಾರೆ.
ಹಾಗೆಯೇ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಸಹ ಭೇಟಿ ಮಾಡಲಾಗಿದ್ದು, ಡಿಎಪಿ ಮತ್ತು ರಸಗೊಬ್ಬರ ಸರಬರಾಜು ಮಾಡಲು ಮನವಿ ಮಾಡಲಾಗಿದೆ. ಒಂದು ವಾರಗಳಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.