ಬೆಂಗಳೂರು: ಪಾವಗಡ ತಾಲೂಕಿನ ಭಾರತದ ಅತೀ ದೊಡ್ಡ ಸೋಲಾರ್ ಪಾರ್ಕ್ನಿಂದಾಗಿ ಸಮೀಪದ ಗ್ರಾಮಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ಬಗ್ಗೆ ಸ್ಪಷ್ಟ ಕಾರಣಗಳನ್ನು ತಿಳಿದುಕೊಳ್ಳಲು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿ. ಗೆ ಸಚಿವ ಸುನೀಲ್ ಕುಮಾರ್ ಸೂಚಿಸಿದ್ದಾರೆ.
ಅವರು ಟಿಎನ್ಐಇ ಜೊತೆಗೆ ಸೋಲಾರ್ ಉತ್ಪಾದನೆ ಹೆಚ್ಚಳದ ಪ್ರಸ್ತಾವನೆ ಬಗ್ಗೆ ಮಾತನಾಡಿದ್ದು, ಸೋಲಾರ್ ಪಾರ್ಕ್ಗಳ ಸಮೀಪ ವಾಸಿಸುವ ಜನರ ಸಮಸ್ಯೆಗಳು, ಅವರ ಆತಂಕಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಜೊತೆಗೆ ರಾಜ್ಯ ಸರ್ಕಾರ ಸೋಲಾರ್ ರೂಫ್ಟಾಪ್ಗಳ ಮೂಲಕ ವಿದ್ಯುತ್ ಉತ್ಪಾದನೆಯ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕವಾಗಿದೆ. ಹಾಗೆಯೇ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ಪ್ಯಾನಲ್ಗಳನ್ನು ಅಳವಡಿಸಲಾಗುತ್ತದೆ. ಬೆಸ್ಕಾಂ ಮತ್ತು ಕೆಆರ್ಇಡಿಎಲ್ ಈ ನಿಟ್ಟಿನಲ್ಲಿ ಜಂಟಿಯಾಗಿ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಗುರಿ ಹೊಂದಿದ್ದು, ಸಾರ್ವಜನಿಕ ವಲಯದಿಂದ ಅರ್ಜಿ ಆಹ್ವಾನಿಸಿದೆ. ಹಾಗೆಯೇ ಸೋಲಾರ್ ಪ್ಯಾನಲ್ಗಳಿರುವ ಪ್ರದೇಶಗಳಲ್ಲಿ ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ತಾಪಮಾನ ನಿಯಂತ್ರಣ ಮಾಡುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.