ನವದೆಹಲಿ: 2 – 18 ವರ್ಷಗಳೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೊರೋನಾ ಲಸಿಕೆ ಕೋವ್ಯಾಕ್ಸಿನ್ನ ತುರ್ತು ಬಳಕೆಗೆ ಕೊರೋನಾ ತಜ್ಞರ ಸಮಿತಿ ಅನುಮೋದನೆ ನೀಡಿದೆ.
ಕಳೆದ ಸೆ. 18 ರಂದು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ 18 ವರ್ಷದೊಳಗಿನ ಮಕ್ಕಳ ಮೇಲೆ ಎರಡನೇ ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ಮುಗಿಸಿತ್ತು. ಆ ಬಳಿಕ ಈ ತಿಂಗಳ ಆರಂಭದಲ್ಲಿ ಈ ಪ್ರಾಯೋಗಿಕ ವರದಿಯ ಡೇಟಾವನ್ನು ಡಿಸಿಜಿಐಗೆ ಸಲ್ಲಿಕೆ ಮಾಡಿತ್ತು.
ಈ ಡೇಟಾದ ಬಗ್ಗೆ ಪೂರಕ ಚರ್ಚೆಗಳನ್ನು ನಡೆಸಿರುವ ಡಿಸಿಜಿಐ, 2 -18 ವರ್ಷಗಳ ಮಕ್ಕಳಿಗೆ ಈ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಈ ಲಸಿಕೆಯನ್ನು ಎರಡು ಹಂತದಲ್ಲಿ ನೀಡಲಾಗುತ್ತದೆ. ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವೆ 20 ದಿನಗಳ ಆಂತರವಿರಲಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.