ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಕಾದಾಟದಲ್ಲಿ ಇಬ್ಬರು ಉಗ್ರರನ್ನು ವಧಿಸಲಾಗಿದೆ.
ಶೋಪಿಯಾನ್ ಜಿಲ್ಲೆಯ ಫಿರಿಪೊರಾ ಪ್ರದೇಶದಲ್ಲಿ ಉಗ್ರಗಾಮಿಗಳು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿವೆ. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದು, ಉಗ್ರರ ಮೇಲೂ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಇಬ್ಬರು ಉಗ್ರರನ್ನು ಯಮಪುರಿಗಟ್ಟಲಾಗಿದೆ. ಇಂದು ಮುಂಜಾನೆ ಶೋಪಿಯಾನ್ನಲ್ಲಿ ಮೂವರು ಉಗ್ರರನ್ನು ದೇಶದ ಭದ್ರತಾ ಪಡೆಗಳು ವಧಿಸಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.