ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇಲ್ಲ. ವಿದ್ಯುತ್ ಅಭಾವ ಎದುರಾಗದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ನಿನ್ನೆ ಅಧಿಕಾರಾಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿರುವ ಅವರು, ಕಲ್ಲಿದ್ದಲು ಪೂರೈಕೆಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಎರಡು ರೇಕ್ ಕಲ್ಲಿದ್ದಲು ನೀಡುವ ಭರವಸೆ ನೀಡಿದ್ದಾರೆ. ಒರಿಸ್ಸಾದಲ್ಲಿ ಮಳೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕಲ್ಲಿದ್ದಲು ಬರಲು ನಿಧಾನವಾಗಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಈ ಬಾರಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಈ ವರೆಗೆ 4 ಲಕ್ಷ 71 ಸಾವಿರ ಕೃಷಿ ಭೂಮಿ ಹಾಳಾಗಿದೆ. ಅಕ್ಟೋಬರ್ 1 ರಿಂದ ಈ ವರೆಗೂ 21 ಮಂದಿ ಮಳೆಯಿಂದಾಗಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ಪರಿಹಾರ ಒದಗಿಸುವುದಕ್ಕೂ ಸರ್ಕಾರ ಸೂಚಿಸಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದ ವಿದ್ಯುತ್ ಉತ್ಪಾದನೆ, ಪೂರೈಕೆ ಸ್ಥಿತಿಗತಿ, ರಾಜ್ಯದ ಪ್ರವಾಹ ಪರಿಸ್ಥಿತಿ ಇತ್ಯಾದಿ ಕುರಿತಂತೆ ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಂತರ ಮಾಧ್ಯಮಗಳಿಗೆ ಮುಖ್ಯಮಂತ್ರಿಗಳು ನೀಡಿದ ಮಾಹಿತಿಯ ಪ್ರಮುಖಾಂಶಗಳು; pic.twitter.com/w5dCISMtbt
— CM of Karnataka (@CMofKarnataka) October 12, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.