ನವದೆಹಲಿ: ಅಫ್ಘಾನ್ ಪ್ರದೇಶವು ಭಯೋತ್ಪಾದನೆಯ ಮೂಲವಾಗದಂತೆ ನೋಡಿಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆ ದೇಶದಲ್ಲಿ ಬದಲಾವಣೆ ತರಲು ಒಗ್ಗಟ್ಟಿನ ಜಾಗತಿಕ ಪ್ರತಿಕ್ರಿಯೆಯನ್ನು ನೀಡಬೇಕಿದೆ ಎಂದಿದ್ದಾರೆ.
ಅಫ್ಘಾನಿಸ್ಥಾನದ ಬಗ್ಗೆ ನಡೆದ ಜಿ 20 ಶೃಂಗಸಭೆಯ ವರ್ಚುವಲ್ ಭಾಷಣದಲ್ಲಿ ಮಾತನಾಡಿದ ಮೋದಿ, ಅಫ್ಘಾನ್ ನಾಗರಿಕರಿಗೆ ತುರ್ತು ಮತ್ತು ಅಡೆತಡೆಯಿಲ್ಲದ ಮಾನವೀಯ ನೆರವು ನೀಡುವಂತೆ ಒತ್ತಾಯಿಸಿದರು ಮತ್ತು ಆ ದೇಶದಲ್ಲಿ ಎಲ್ಲರನ್ನೂ ಒಳಗೊಂಡ ಆಡಳಿತದ ಅಗತ್ಯವನ್ನು ಒತ್ತಿ ಹೇಳಿದರು.
ಅಫ್ಘಾನಿಸ್ಥಾನದಲ್ಲಿ ಪರಿಸ್ಥಿತಿಯನ್ನು ಸುಧಾರಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ 2593 ಆಧಾರಿತ ಏಕೀಕೃತ ಅಂತಾರಾಷ್ಟ್ರೀಯ ಪ್ರತಿಕ್ರಿಯೆ ಅಗತ್ಯವಿದೆ ಎಂದು ಅವರು ಹೇಳಿದರು.
“ಅಫ್ಘಾನಿಸ್ಥಾನದಲ್ಲಿ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಿದೆ. ಅಪ್ಘಾನ್ ಪ್ರದೇಶವನ್ನು ಭಯೋತ್ಪಾದನೆಯ ಮೂಲವಾಗದಂತೆ ತಡೆಯಲು ಒತ್ತು ಹೇಳಿದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
A unified international response based on UNSC Resolution 2593 is necessary to improve the situation in Afghanistan.
— Narendra Modi (@narendramodi) October 12, 2021
UNSC ನಿರ್ಣಯವು ಜಾಗತಿಕ ಸಂಸ್ಥೆಯ ಅಧ್ಯಕ್ಷತೆಯಲ್ಲಿ ಆಗಸ್ಟ್ 30 ರಂದು ಅಂಗೀಕರಿಸಲ್ಪಟ್ಟಿತು, ಅಫ್ಘಾನಿಸ್ಥಾನದಲ್ಲಿ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ಅಗತ್ಯತೆಯ ಬಗ್ಗೆ ಇದು ಮಾತನಾಡಿದೆ. ಅಪ್ಘಾನ್ ಪ್ರದೇಶವನ್ನು ಭಯೋತ್ಪಾದನೆಗೆ ಬಳಸಬಾರದು ಮತ್ತು ಸಂಧಾನದ ಮೂಲಕ ರಾಜಕೀಯ ಬಿಕ್ಕಟ್ಟಿಗೆ ಇತ್ಯರ್ಥವನ್ನು ಕಂಡುಹಿಡಿಯಬೇಕು ಎಂದು ಪ್ರತಿಪಾದಿಸಿದೆ.
ಹಸಿವು ಮತ್ತು ಅಪೌಷ್ಟಿಕತೆಯನ್ನು ಎದುರಿಸುತ್ತಿರುವ ಅಫ್ಘಾನ್ ಜನರ ನೋವನ್ನು ಪ್ರತಿಯೊಬ್ಬ ಭಾರತೀಯರು ಅನುಭವಿಸುತ್ತಾರೆ ಮತ್ತು ಮಾನವೀಯ ನೆರವಿಗೆ ಅಫ್ಘಾನಿಸ್ಥಾನವು ತಕ್ಷಣದ ಮತ್ತು ಅಡೆತಡೆಯಿಲ್ಲದ ಪ್ರವೇಶವನ್ನು ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಅಂತರಾಷ್ಟ್ರೀಯ ಸಮುದಾಯದ ಅಗತ್ಯವನ್ನು ಮೋದಿ ಒತ್ತಿ ಹೇಳಿದರು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
“ಅಪ್ಘಾನ್ ಪ್ರದೇಶವು ಪ್ರಾದೇಶಿಕವಾಗಿ ಅಥವಾ ಜಾಗತಿಕವಾಗಿ ಮೂಲಭೂತವಾದ ಮತ್ತು ಭಯೋತ್ಪಾದನೆಯ ಮೂಲವಾಗದಂತೆ ನೋಡಿಕೊಳ್ಳುವ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.