ನವದೆಹಲಿ: ಭಾರತದಲ್ಲಿ ಕರೋನವೈರಸ್ ಸಾಂಕ್ರಾಮಿಕ ರೋಗ ಅಪ್ಪಳಿಸಿದ ಬಳಿಕ ವಿಮಾನಯಾನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ದೇಶೀಯ ವಿಮಾನಗಳು ಅರ್ಧ ಸಾಮರ್ಥ್ಯದೊಂದಿಗೆ ಮಾತ್ರ ಸಂಚರಿಸಲು ಅವಕಾಶವಿತ್ತು. ಆದರೆ ಈಗ ನಿರ್ಬಂಧವನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ. ಅಕ್ಟೋಬರ್ 18 ರಿಂದ ದೇಶಿ ಅಭಿಮಾನಗಳು ಸಂಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸಬಹುದಾಗಿದೆ.
ನಾಗರಿಕ ವಿಮಾನಯಾನ ಸಚಿವಾಲಯವು ಯಾವುದೇ ಸಾಮರ್ಥ್ಯ ನಿರ್ಬಂಧವಿಲ್ಲದೆ ಈ ತಿಂಗಳ 18 ರಿಂದ ನಿಗದಿತ ದೇಶೀಯ ವಾಯು ಕಾರ್ಯಾಚರಣೆಯನ್ನು ಪುನಃಸ್ಥಾಪಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ನಿಗದಿತ ದೇಶೀಯ ಆಪರೇಟರ್ಗಳ ಪ್ರಸ್ತುತ ಸ್ಥಿತಿಯನ್ನು ಮತ್ತು ವಿಮಾನ ಪ್ರಯಾಣಕ್ಕಾಗಿ ಪ್ರಯಾಣಿಕರ ಬೇಡಿಕೆಯನ್ನು ಪರಿಶೀಲಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸಚಿವಾಲಯವು, ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣ ನಿರ್ವಾಹಕರು ಕೋವಿಡ್-19 ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆ ಮತ್ತು ಪ್ರಯಾಣದ ಸಮಯದಲ್ಲಿ ಕೋವಿಡ್ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.