ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಕಠಿಣ ಕಾನೂನು ಕ್ರಮವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಯಾವ ರೀತಿಯಲ್ಲಿ ಜಾರಿಗೆ ತರಬೇಕು ಎಂಬ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಆ ಬಳಿಕ ನಮ್ಮ ರಾಜ್ಯದಲ್ಲಿಯೂ ಸಮರ್ಥ ಕಾನೂನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಭಾಗದಲ್ಲಿ ಗೋಹತ್ಯೆಗಳಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.