ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಎರಡು ದಿನಗಳ ಕಾಲ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.
ಕೋವಿಂದ್ ಲೇಹ್ ವಿಮಾನ ನಿಲ್ದಾಣದಲ್ಲಿ ಗಾರ್ಡ್ ಆಫ್ ಆನರ್ ಅನ್ನು ಸ್ವೀಕರಿಸಲಿದ್ದಾರೆ ಮತ್ತು ನಂತರ ಅವರು ಸಿಂಧು ದರ್ಶನಕ್ಕಾಗಿ ಸಿಂಧು ಘಾಟ್ಗೆ ತೆರಳಲಿದ್ದಾರೆ. ಇದು ಲೇಹ್ ಗೆ ಅವರ ಎರಡನೇ ಭೇಟಿಯಾಗಿದೆ.
ಕೋವಿಂದ್ ಅವರು ಸಂಜೆ ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸೈನಿಕರೊಂದಿಗೆ ಸಂವಾದ ನಡೆಸಲಿದ್ದಾರೆ.
ನಾಳೆ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿಗಳು ಡ್ರಾಸಿನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆ ಮಾಡಲಿದ್ದಾರೆ. ಸೇನೆಯ ಹಿರಿಯ ಅಧಿಕಾರಿಗಳು ಅವರಿಗೆ ಕಾರ್ಗಿಲ್ ಯುದ್ಧದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕೋವಿಂದ್ ಅವರು ಯುದ್ಧ ಸ್ಮಾರಕದಲ್ಲಿ ಸೈನಿಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಅವರು ದಸರಾವನ್ನು ಯೋಧರೊಂದಿಗೆ ಡ್ರಾಸಿನಲ್ಲಿ ಆಚರಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.