ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮರುಚಾಲನೆ ನೀಡಿದರು.
ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಕಾರ್ಯಕ್ರಮವನ್ನು ಅವರು ಉದ್ಘಾಟನೆ ಮಾಡಿದರು.
ಸಚಿವ ಆರ್. ಅಶೋಕ್ ಅವರು ಆರಂಭಿಸಿದ್ದ ಈ ಯೋಜನೆಯು ನ್ಯಾಮತಿ ತಾಲೂಕಿನ ಸುರಹೊನ್ನೆ ಮತ್ತು ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆಯಲಿದೆ. ಇಂದು ಜಿಲ್ಲಾಧಿಕಾರಿಗಳು ಕಸ್ತೂರಬಾ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಇದೀಗ ಕೊರೋನಾ ಸೋಂಕು ಇಳಿಮುಖವಾಗಿ, ರಾಜ್ಯ ಚೇತರಿಸಿಕೊಂಡಿದ್ದು ಮತ್ತೆ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮತ್ತು ಜನರ ಕಷ್ಟಗಳನ್ನು ಅವರಿದ್ದಲ್ಲೇ ಹೋಗಿ ತಿಳಿಯುವ, ಪರಿಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವ ಪಡೆದಿದೆ.
ಕಂದಾಯ ಸಚಿವ @RAshokaBJP, ಆರ್.ಡಿ.ಪಿ.ಆರ್ ಸಚಿವ @ikseshwarappa, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ @MPRBJP, ಸಂಸದ @GMSBJP, ಶಾಸಕ ಎಸ್.ವಿ.ರಾಮಚಂದ್ರಪ್ಪ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. (2/2) pic.twitter.com/qSJOspxL1x
— CM of Karnataka (@CMofKarnataka) October 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.