ಬೆಂಗಳೂರು: ಕರ್ನಾಟಕವು ನವ ಉದ್ಯಮಗಳ ತೊಟ್ಟಿಲಾಗಿದ್ದು, ಯುಎಇಯಲ್ಲಿ ತಂತ್ರಜ್ಞಾನ ಆಧರಿತ ಹಲವು ಕ್ಷೇತ್ರಗಳಲ್ಲಿ ಸಮರ್ಥ ಪರಿಹಾರ ಒದಗಿಸಲು ಉತ್ಸುಕವಾಗಿದೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಅವರು ನಿನ್ನೆ ‘ವರ್ಲ್ಡ್ ದುಬೈ ಎಕ್ಸ್ಪೋ 2020’ ಸಮಾರಂಭದಲ್ಲಿ ಮಾತನಾಡಿ, ರಾಜ್ಯದ ನವೋದ್ಯಮಗಳು ಯುಎಇಯಲ್ಲಿ ಸಾಗಾಣೆ, ಆರೋಗ್ಯ ಸೇವೆ, ತ್ಯಾಜ್ಯ ನಿರ್ವಹಣೆ, ಮೂಲಸೌಲಭ್ಯ ಮೊದಲಾದ ಹಲವು ಕ್ಷೇತ್ರಗಳಲ್ಲಿ ನೆರವು ನೀಡಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ದೇಶವನ್ನು 5 ಟ್ರಿಲಿಯನ್ ಡಾಲರ್ ಸಾಮರ್ಥ್ಯದ ಆರ್ಥಿಕ ಶಕ್ತಿಯಾಗಿ ಬೆಳೆಸುವ ಧ್ಯೇಯ ಹೊಂದಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕರ್ನಾಟಕ ಸಹ ಉದ್ಯಮ ಕ್ಷೇತ್ರದಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಯುಎಇ ಉದ್ಯಮಿಗಳಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಮುಕ್ತ ಅವಕಾಶ ಇರುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರ ಹೂಡಿಕೆದಾರರಿಗೆ ಪ್ರೋತ್ಸಾಹ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.