ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದಿನಿಂದ ಐದು ದಿನಗಳ ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ. ಇಸ್ರೇಲಿನ ಪರ್ಯಾಯ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಯಾರ್ ಲ್ಯಾಪಿಡ್ ಅವರ ಆಹ್ವಾನದ ಮೇರೆಗೆ ಅವರು ಇಂದಿನಿಂದ ಅಧಿಕೃತ ಇಸ್ರೇಲ್ ಭೇಟಿ ಆರಂಭಗೊಳಿಸಿದ್ದಾರೆ.
ಇದು ವಿದೇಶಾಂಗ ಸಚಿವರ ಮೊದಲ ಇಸ್ರೇಲ್ ಭೇಟಿಯಾಗಿದೆ. ಅವರು ಇಸ್ರೇಲ್ನ ಪರ್ಯಾಯ ಪ್ರಧಾನಿ ಮತ್ತು ವಿದೇಶಾಂಗ ಸಚಿವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಅಲ್ರಿನ ರಾಷ್ಟ್ರಪತಿ, ಪ್ರಧಾನಿ ಮತ್ತು ನೆಸೆಟ್ ಸ್ಪೀಕರ್ರನ್ನೂ ಭೇಟಿ ಮಾಡಲಿದ್ದಾರೆ.
ಜುಲೈ 2017 ರಲ್ಲಿ ಇಸ್ರೇಲ್ಗೆ ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಭೇಟಿಯ ಸಮಯದಲ್ಲಿ ಭಾರತ ಮತ್ತು ಇಸ್ರೇಲ್ ದ್ವಿಪಕ್ಷೀಯ ಸಂಬಂಧಗಳು ಕಾರ್ಯತಂತ್ರದ ಸಹಭಾಗಿತ್ವ ಮಟ್ಟಕ್ಕೆ ಏರಿತು. ಅಂದಿನಿಂದ, ಉಭಯ ದೇಶಗಳ ನಡುವಿನ ಸಂಬಂಧವು ಜ್ಞಾನ ಆಧಾರಿತ ಪಾಲುದಾರಿಕೆಯನ್ನು ವಿಸ್ತರಿಸುವತ್ತ ಗಮನಹರಿಸಿದೆ, ಇದು ನಾವೀನ್ಯತೆ ಮತ್ತು ಸಂಶೋಧನೆಯಲ್ಲಿ ಸಹಯೋಗವನ್ನು ಒಳಗೊಂಡಿದೆ , ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಉತ್ತೇಜಿಸುವುದು ಕೂಡ ಇದರಲ್ಲಿ ಸೇರಿದೆ.
ವಿದೇಶಾಂಗ ವ್ಯವಹಾರಗಳ ಸಚಿವರು ಇಸ್ರೇಲ್ನಲ್ಲಿರುವ ಭಾರತೀಯ ಮೂಲದ ಯಹೂದಿ ಸಮುದಾಯ, ಇಂಡಾಲಜಿಸ್ಟ್ಗಳು, ಪ್ರಸ್ತುತ ಇಸ್ರೇಲಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಹೈಟೆಕ್ ಉದ್ಯಮಗಳು ಸೇರಿದಂತೆ ವ್ಯಾಪಾರಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.