ತಿರುವನಂತಪುರಂ: ಕೇರಳದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 25 ಕ್ಕೇರಿದೆ. ನಿನ್ನೆ ಇಡುಕ್ಕಿ ಜಿಲ್ಲೆಯ ಕಕ್ಕಾಯಾರ್ನಲ್ಲಿ ಸಂಭವಿಸಿದ ಭೂಕುಸಿತಗಳ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ರಾಜ್ಯದಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸಹ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜನರು ಎಚ್ಚರಿಕೆಯಿಂದ ಇರುವಂತೆ ಜನರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾರ್ಯ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ. ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಾರ್ವಜನಿಕರನ್ನು ಕೋರಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ರಾಜ್ಯದಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ.
Spoke to Kerala CM Shri @vijayanpinarayi and discussed the situation in the wake of heavy rains and landslides in Kerala. Authorities are working on the ground to assist the injured and affected. I pray for everyone’s safety and well-being.
— Narendra Modi (@narendramodi) October 17, 2021
ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, ಕೇರಳದಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದ ಹಲವರು ಪ್ರಾಣ ಕಳೆದುಕೊಂಡಿರುವುದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು ಎಂದಿದ್ದಾರೆ.
It is saddening that some people have lost their lives due to heavy rains and landslides in Kerala. Condolences to the bereaved families.
— Narendra Modi (@narendramodi) October 17, 2021
ಗಾಯಗೊಂಡ ಮತ್ತು ಪೀಡಿತ ಜನರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸಚಿವಾಲಯವು ಕೇರಳದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದ್ದಾರೆ. ಅಗತ್ಯವಿರುವ ಜನರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರವು ಎಲ್ಲ ರೀತಿಯ ಬೆಂಬಲವನ್ನು ನೀಡಲಿದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.
We are continuously monitoring the situation in parts of Kerala in the wake of heavy rainfall and flooding. The central govt will provide all possible support to help people in need. NDRF teams have already been sent to assist the rescue operations. Praying for everyone’s safety.
— Amit Shah (@AmitShah) October 17, 2021
ನೆರವಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡಗಳನ್ನು ಈಗಾಗಲೇ ಕಳುಹಿಸಲಾಗಿದೆ ಎಂದು ಶಾ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.