ಮಂಗಳೂರು: ನಗರದ ಮಾಲ್ಗಳು, ಚಿತ್ರಮಂದಿರಗಳು, ಸಭಾಂಗಣಗಳ ಒಳ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡೂ ಡೋಸ್ಗಳನ್ನು ಹಾಕಿಸಿಕೊಂಡಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಅವರು ನಿನ್ನೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ದರ 0.46% ಗೆ ಇಳಿದಿದೆ. ಅಕ್ಟೋಬರ್ 14 ರಿಂದಲೇ ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ಅಡಿಟೋರಿಯಂಗಳು 100% ಸಾಮರ್ಥ್ಯದ ಜೊತೆಗೆ ಕಾರ್ಯನಿರ್ವಹಿಸಲೀ ಅನುಮತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆದರೆ ಇಂತಹ ಸ್ಥಳಗಳಿಗೆ ಭೇಟಿ ನೀಡುವ ಎಲ್ಲರೂ ಎರಡು ಡೋಸ್ ಕೊರೋನಾ ಲಸಿಕೆಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ವಯಸ್ಸಾದವರು, ಗರ್ಭಿಣಿಯರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಕೊರೋನಾ ಪ್ರಕರಣ ಹೆಚ್ಚುವುದು, ಮೂರನೇ ಅಲೆಯನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುವುದು. ಲಸಿಕೆ ಪಡೆದ ದಾಖಲೆ ಹೊಂದಿರದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಂಸಿಸಿ ಆಯುಕ್ತ ಅಕ್ಷಯ್ ಶ್ರೀಧರ್ ಎಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.