ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ್ಯಾಂಕ್ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿ ರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಿಲಾಯಿತು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ರವರು ಸಿಂಚನಾಲಕ್ಷ್ಮಿ ಅವರಿಗೆ ಶಾಲು ಹೊದಿಸಿ ಪುಸ್ತಕ ಮತ್ತು ಸ್ಮರಣಿಕೆ ನೀಡಿ ಅಭಿನಂದಿಸಿದರು.
ಈಕೆ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್, ಶೋಭಾ ಬಿ. ದಂಪತಿ ಪುತ್ರಿ.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸಂತೋಷ್ ಬಿ., ಉಪನ್ಯಾಸಕರಾದ ಹರೀಶ್ ಭಟ್, ಮುರಳಿ ಪಿ.ಜಿ. ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.