ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಆಡಳಿತ ಮತ್ತು ದುಬೈ ಸರ್ಕಾರವು ಕೈಗಾರಿಕೀಕರಣದಲ್ಲಿ ಮತ್ತು ಸುಸ್ಥಿರ ಬೆಳವಣಿಗೆಯಲ್ಲಿ ಕೇಂದ್ರಾಡಳಿತ ಪ್ರದೇಶವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಒಪ್ಪಂದಕ್ಕೆ ಸಹಿ ಹಾಕಿದೆ.
ರಿಯಲ್ ಎಸ್ಟೇಟ್ ಅಭಿವೃದ್ಧಿ, ಕೈಗಾರಿಕಾ ಪಾರ್ಕ್ಗಳು, ಐಟಿ ಟವರ್ಗಳು, ವಿವಿಧೋದ್ದೇಶ ಟವರ್ಗಳು, ಲಾಜಿಸ್ಟಿಕ್ಸ್, ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಹಲವು ಕ್ಷೇತ್ರಗಳು ಮತ್ತು ಪ್ರದೇಶಗಳನ್ನು ಈ ಒಪ್ಪಂದ ಒಳಗೊಂಡಿದೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಟ್ವಿಟ್ ಮಾಡಿ, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯ ಪ್ರಯಾಣಕ್ಕೆ ಇಂದು ಮಹತ್ವದ ದಿನವಾಗಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಕೈಗಾರಿಕಾ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ನಮ್ಮ ಆಡಳಿತ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಇಂದು ಸಹಿ ಹಾಕಿದ ಒಪ್ಪಂದವು ಜಮ್ಮು ಮತ್ತು ಕಾಶ್ಮೀರದ ನಿರೀಕ್ಷೆಯನ್ನು ಈಡೇರಿಸುತ್ತದೆ ಮತ್ತು ಜಮ್ಮು- ಕಾಶ್ಮೀರದ ಜನರ ಏಳಿಗೆಗೆ ಪ್ರಮುಖವಾಗಿರುವ ಭವಿಷ್ಯದ ವ್ಯಾಪಾರ ವಲಯದ ವೇಗವನ್ನು ಹೆಚ್ಚಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ, ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದ ಅಭೂತಪೂರ್ವ ಅಭಿವೃದ್ಧಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಆತ್ಮ ನಿರ್ಭರ ಜಮ್ಮು ಮತ್ತು ಕಾಶ್ಮೀರವನ್ನು ನಿರ್ಮಿಸುವ ಸರ್ಕಾರದ ಬದ್ಧತೆಯನ್ನು ಒಪ್ಪಂದ ಪುನರುಚ್ಚರಿಸುತ್ತದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.