ಚಿತ್ರದುರ್ಗ: ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಇಡೀ ದೇಶ ಒಪ್ಪಿದೆ. ಇಡೀ ವಿಶ್ವಕ್ಕೆ ಅವರ ನಾಯಕತ್ವದ ಅರಿವಿದೆ. ಅಂತಹ ನಾಯಕನ ಬಗ್ಗೆ ಕಾಂಗ್ರೆಸ್ ಬಳಸಿರುವ ಪದಗಳು, ಆ ಪಕ್ಷದ ಯೋಗ್ಯತೆ ತಿಳಿಸುತ್ತದೆ. ಪ್ರಧಾನಿಗೆ ಅವಹೇಳನ ಮಾಡಿದ ಕಾಂಗ್ರೆಸ್ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಹಗುರವಾಗಿ ಮಾತನಾಡುವ ಮೂಲಕ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ದೇಶದಲ್ಲಿ ಮುಳುಗುತ್ತಿರುವ ಹಡಗಾಗಿದ್ದು, ಅದರ ಒಂದು ಚೂರು ಕರ್ನಾಟಕದಲ್ಲಿ ಮಾತ್ರವೇ ಉಳಿದುಕೊಂಡಿದೆ. ಮುಂದೆ ಅದೂ ಇರುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನ ಆಂತರಿಕ ಕಚ್ಚಾಟ ಹೆಚ್ಚುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ತಿಕ್ಕಾಟ ಆರಂಭವಾಗಿದೆ. ಇದರ ಪ್ರಯೋಜನವನ್ನು ಬಿಜೆಪಿ ಪಡೆಯುವುದಿಲ್ಲ. ಟೀಕಿಸುವ ಮೂಲಕ ಚುನಾವಣೆ ಗೆಲ್ಲುವ ಮನಸ್ಥಿತಿ ಬಿಜೆಪಿಯದ್ದಲ್ಲ. ಸರ್ಕಾರದ ಸಾಧನೆಯನ್ನು ಜನರ ಮುಂದಿಡುವ ಮೂಲಕವೇ ಮತದಾನ ಎದುರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.