ಚಿತ್ರದುರ್ಗ: ಜಿಲ್ಲೆಯ 1000 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ಶಿಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುರುಘಾ ಮಠದಲ್ಲಿ ನಿನ್ನೆ ನಡೆದ ಶರಣ ಸಂಸ್ಕೃತಿ ಉತ್ಸವ ಸಮಾರೋಪ, ಮುರುಘಾ ಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ, ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿಗಳು ಚಿತ್ರದುರ್ಗದಲ್ಲಿ 1 ರಿಂದ 2 ಸಾವಿರ ಎಕರೆ ಭೂಮಿಯನ್ನು ಗುರುತಿಸಿದಲ್ಲಿ, ಅಲ್ಲಿ ಕೈಗಾರಿಕಾ ಟೌನ್ಶಿಪ್ ನಿರ್ಮಾಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಹಾಗೆಯೇ ಶರಣರ ಜನ್ಮದಿನವನ್ನು ಸಮಾನತೆಯ ದಿನವನ್ನಾಗಿ ಆಚರಿಸಲು ಚಿಂತನೆ ನಡೆಸುವುದಾಗಿಯೂ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ‘ಶರಣಶ್ರೀ’ ಪ್ರಶಸ್ತಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ‘ಬಸವ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯಮಂತ್ರಿ @BSBommai ಅವರು ಇಂದು 'ಶರಣ ಸಂಸ್ಕೃತಿ ಉತ್ಸವ – 2021' ಮತ್ತು ಡಾ. ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣ ತೃತೀಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. (1/2)#SharanaSanskrutiUtsava2021 pic.twitter.com/NjSPtp8WRc
— CM of Karnataka (@CMofKarnataka) October 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.