ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ದೇಶದ ವಿವಿಧ ಭಾಗಗಳಲ್ಲಿ ಕನಿಷ್ಠ 71 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹರಡಿದ್ದಕ್ಕಾಗಿ ಸುಮಾರು 450 ಜನರನ್ನು ಬಂಧಿಸಲಾಗಿದೆ.
ಕಳೆದ ಐದು ದಿನಗಳಲ್ಲಿ ಪೂಜಾ ಸ್ಥಳಗಳು, ದೇವಸ್ಥಾನಗಳು, ಹಿಂದೂಗಳ ಮನೆಗಳು ಮತ್ತು ವ್ಯಾಪಾರಿಗಳ ಮೇಲೆ ನಡೆದ ದಾಳಿ ಮತ್ತು ದುರ್ಗಾ ಪೂಜೆಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳನ್ನು ಹರಡಿದ್ದಕ್ಕಾಗಿ 450 ಜನರನ್ನು ಬಂಧಿಸಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ದೇಶದ ವಿವಿಧ ಭಾಗಗಳಲ್ಲಿ ಕನಿಷ್ಠ 71 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಧಾನ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾರ್ಯಾಚರಣೆ ನಡೆಯುತ್ತಿರುವುದರಿಂದ ಬಂಧನಗಳು ಮತ್ತು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೇಳಿಕೆಯ ಪ್ರಕಾರ, ಪೊಲೀಸ್ ಇಲಾಖೆ ವದಂತಿಗಳು ಹರಡಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದವರನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಸತ್ಯ ಪರಿಶೀಲನೆ ಇಲ್ಲದೆ ಯಾವುದನ್ನೂ ನಂಬದಂತೆ ಜನರನ್ನು ಒತ್ತಾಯಿಸುತ್ತಿದೆ.
ಕಳೆದ ಭಾನುವಾರ ರಾತ್ರಿ, ರಂಗಪುರದ ಪಿರಗಂಜ್ ಉಪಜಿಲಾದಲ್ಲಿರುವ ಹಿಂದೂ ಗ್ರಾಮಗಳ ಮೇಲೆ ಮುಸ್ಲಿಮರು ದಾಳಿ ನಡೆಸಿದ್ದಾರೆ. ಫೇಸ್ಬುಕ್ ವದಂತಿಗಳನ್ನು ನಂಬಿ ಈ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಯಲ್ಲಿ ಕನಿಷ್ಠ 20 ಮನೆಗಳು ಸುಟ್ಟುಹೋಗಿವೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ಪ್ರಚೋದನಕಾರಿ ಫೇಸ್ಬುಕ್ ಪೋಸ್ಟ್ ಅಪ್ಲೋಡ್ ಮಾಡಿದ ಆರೋಪಿತ ಯುವಕನನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹರಡುವ ಮೂಲಕ ಅಸ್ಥಿರತೆಯನ್ನು ಸೃಷ್ಟಿಸುವ ಪಿತೂರಿಗಳ ವಿರುದ್ಧ ಎಲ್ಲರಿಗೂ ಪೋಲಿಸ್ ಹೆಡ್ ಕ್ವಾರ್ಟರ್ಸ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ ಎಂದು ವರದಿ ಮಾಡಿದೆ.
ಕಳೆದ 13 ದಿನಗಳಿಂದ ಬಾಂಗ್ಲಾದೇಶದಲ್ಲಿ ಕೋಮು ಉದ್ವಿಗ್ನತೆ ಆವರಿಸಿದೆ. ಅಕ್ಟೋಬರ್ 13 ರಂದು ಕುಮಿರಾದಲ್ಲಿನ ಪೂಜಾ ಮಂಟಪದಲ್ಲಿ ಕುರಾನ್ ಅನ್ನು ಅವಮಾನಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು, ಇದು ಬಾಂಗ್ಲಾ ದೇಶದಾದ್ಯಂತ ಹಲವಾರು ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದೆ.
ಅಕ್ಟೋಬರ್ 13 ರಂದು ಚಂದಪುರದ ಹಾಜಿಗಂಜ್ನಲ್ಲಿ ಪೂಜಾ ಸ್ಥಳಗಳ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು. ನೊಖಾಲಿಯ ಚೌಮುಹಾನಿಯಲ್ಲಿ, ಅಕ್ಟೋಬರ್ 15 ರಂದು ಹಿಂದೂ ದೇವಾಲಯಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.