ನವದೆಹಲಿ: ಭಾರತ, ಯುಎಸ್, ಯುಎಇ ಮತ್ತು ಇಸ್ರೇಲ್ ಕಡಲ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿವೆ. ಈ ಸಭೆ ಫಲಪ್ರದವಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಅವರು ಯುಎಸ್, ಯುಎಇ ಮತ್ತು ಇಸ್ರೇಲ್ ವಿದೇಶಾಂಗ ಮಂತ್ರಿಗಳೊಂದಿಗಿನ ತಮ್ಮ ಮೊದಲ ಭೇಟಿಯನ್ನು ಫಲಪ್ರದ ಎಂದು ಹೇಳಿದ್ದಾರೆ.
ಆರ್ಥಿಕ ಬೆಳವಣಿಗೆ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಚರ್ಚಿಸಿದ್ದೇವೆ ಎಂದು ಜೈಶಂಕರ್ ಹೇಳಿದ್ದಾರೆ.
ಇಸ್ರೇಲ್ ವಿದೇಶಾಂಗ ಸಚಿವ ಯಾರ್ ಲ್ಯಾಪಿಡ್ ಮತ್ತು ಜೈಶಂಕರ್ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಮತ್ತು ಯುಎಇ ವಿದೇಶಾಂಗ ಸಚಿವ ಅಬ್ದುಲ್ಲಾ ಬಿನ್ ಜಾಯೆದ್ ಅವರೊಂದಿಗೆ ವರ್ಚುವಲ್ ಸಭೆಯನ್ನು ನಡೆಸಿದ್ದಾರೆ.
ಯುಎಸ್ ವಕ್ತಾರ ನೆಡ್ ಪ್ರೈಸ್ ಸಭೆಯ ಬಗ್ಗೆ ಮಾಹಿತಿ ನೀಡಿ, ಮಂತ್ರಿಗಳು ಹವಾಮಾನ ಬದಲಾವಣೆ, ಇಂಧನ ಸಹಕಾರ ಕಡಲ ಭದ್ರತೆ ಮತ್ತು ಆಯಾ ಪ್ರದೇಶಗಳಲ್ಲಿ ಆರ್ಥಿಕ ಮತ್ತು ರಾಜಕೀಯ ಸಹಕಾರವನ್ನು ವಿಸ್ತರಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ಅವರು ಈ ಪ್ರದೇಶದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಸಹಯೋಗಕ್ಕಾಗಿ ಭವಿಷ್ಯದ ಅವಕಾಶಗಳ ಬಗ್ಗೆ ಚರ್ಚಿಸಿದರು ಎಂದಿದ್ದಾರೆ.
ಈ ಹಿಂದೆ, ಭಾರತ ಮತ್ತು ಇಸ್ರೇಲ್ ಪರಸ್ಪರ ಕೋವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪರಿಗಣಿಸಲು ಒಪ್ಪಿಕೊಂಡಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಜೈಶಂಕರ್ ಅವರು ಇಸ್ರೇಲಿ ಸಚಿವ ಯಾರ್ ಲ್ಯಾಪಿಡ್ ಜೊತೆ ಮಾತುಕತೆ ನಡೆಸಿದ ನಂತರ ಇದನ್ನು ಘೋಷಿಸಿದರು.
ಇಸ್ರೇಲ್ ಪ್ರವಾಸದಲ್ಲಿರುವ ಡಾ.ಜೈಶಂಕರ್, ಅಲ್ಲಿನ ಸರ್ಕಾರಿ ಅಧಿಕಾರಿಗಳು, ವ್ಯಾಪಾರ ಮುಖಂಡರು ಮತ್ತು ಭಾರತೀಯ ಯಹೂದಿ ಸಮುದಾಯದೊಂದಿಗೆ ಸಭೆ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.