ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಇಂದು ಕುಶಿನಗರ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಕುಶಿನಗರ ವಿಮಾನ ನಿಲ್ದಾಣವು ರಾಜ್ಯದ ಮೂರನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಶೀಘ್ರದಲ್ಲೇ ಯುಪಿ ಐದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ದೇಶದ ಏಕೈಕ ರಾಜ್ಯವಾಗಿ ಹೊರಹೊಮ್ಮಲಿದೆ.
ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಲಕ್ನೋ ಮತ್ತು ವಾರಣಾಸಿಯ ವಿಮಾನ ನಿಲ್ದಾಣಗಳ ಬಳಿಕದ ಮೂರನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಲಕ್ನೋ ವಿಮಾನ ನಿಲ್ದಾಣವು ಗಲ್ಫ್ ದೇಶಗಳಾದ ಒಮನ್, ಕುವೈತ್, ಯುಎಇ ಸೇರಿದಂತೆ ಅಂತರರಾಷ್ಟ್ರೀಯ ಸ್ಥಳಗಳಿಗೆ ವಿಮಾನಗಳನ್ನು ನಿರ್ವಹಿಸುತ್ತದೆ. ವಾರಣಾಸಿ ವಿಮಾನ ನಿಲ್ದಾಣವು ಥೈಲ್ಯಾಂಡ್, ನೇಪಾಳಕ್ಕೆ ವಿಮಾನಗಳನ್ನು ನಿರ್ವಹಿಸುತ್ತದೆ.
ಕುಶಿನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉದ್ಘಾಟನಾ ವಿಮಾನವು ಶ್ರೀಲಂಕಾದ ಕೊಲಂಬೊದಿಂದ 125 ಗಣ್ಯರು ಮತ್ತು ಬೌದ್ಧ ಸನ್ಯಾಸಿಗಳನ್ನು ಹೊತ್ತು ತಂದಿದೆ.
ಶೀಘ್ರದಲ್ಲೇ ನೋಯ್ಡಾ ಮತ್ತು ಅಯೋಧ್ಯೆಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಉದ್ಘಾಟನೆಯಾಗಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.