ಅಹ್ಮದಾಬಾದ್: ನಮ್ಮ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ ನಮಗೂ ಮೀಸಲಾತಿ ಕಲ್ಪಿಸಬೇಕೆಂದು ಪಟೇಲ್ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ ಹಿನ್ನಲೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.
ಅಹ್ಮದಾಬಾದ್, ಸೂರತ್, ರಾಜ್ಕೋಟ್, ಮೆಹಸನ. ಪಠಾಣ್, ಪಲನ್ಪುರ್, ವಿಸ್ನಗರ್, ಜಮ್ನಾನಗರ್ನಲ್ಲಿ ಕರ್ಫ್ಯೂವನ್ನು ಮುಂದುವರೆಸಲಾಗಿದ್ದು, ಸೇನೆಯನ್ನು ನಿಯೋಜನೆಗೊಳಿಸಲಾಗಿದೆ.
ಬುಧವಾರ ನಡೆದ ಹಿಂಸೆಯಿಂದಾಗಿ 8 ಮಂದಿ ಸಾವನ್ನಪ್ಪಿ, 100 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ರೈಲ್ವೇ ಸ್ಟೇಶನ್ಗಳಿಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಸೇನೆ ಫ್ಲ್ಯಾಗ್ಮಾಚ್ ನಡೆಸಿದೆ. ಯಾವುದೇ ಅನಾಹುತಗಳು ನಡೆಯದಂತೆ ಅಲ್ಲಲ್ಲಿ ಗಸ್ತು ತಿರುಗುತ್ತಿದ್ದಾರೆ.
ಪಟೇಲ್ ಸಮುದಾಐದ ಈ ಪ್ರತಿಭಟನೆ ಗುಜರಾತ್ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪರಿಸ್ಥಿತಿಯ ನಿಯಂತ್ರಣಕ್ಕೆ ಹರ ಸಾಹಸಪಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.