ಬೆಂಗಳೂರು: ರಾಜಿ ಸರ್ಕಾರ ಆಡಳಿತ ವ್ಯವಸ್ಥೆಗೆ ಮೇಜರ್ ಸರ್ಜರಿ ಮಾಡಿದ್ದು, 20 ಮಂದಿ ಡಿವೈಎಸ್ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ರಾಜೇಂದ್ರ ಡಿ. ಎಸ್. ಅವರನ್ನು ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಉಪ ವಿಭಾಗಕ್ಕೆ, ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ರಂಗಪ್ಪ ಟಿ. ಅವರನ್ನು ಬೆಂಗಳೂರು ನಗರ ಸಂಪಿಗೆಹಳ್ಳಿ ಉಪ ವಿಭಾಗಕ್ಕೆ, ಎಸ್ಐಟಿಯ ಕರ್ನಾಟಕ ಲೋಕಾಯುಕ್ತದಲ್ಲಿದ್ದಂತ ಉದಯ್ ಭಾಸ್ಕರ್ ಜಿ.ವಿ. ಅವರನ್ನು ಹಾಸನ ಉಪ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಒಟ್ಟು 20 ಸಿವಿಲ್ ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ನಿನ್ನೆಯಷ್ಟೇ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದೀಗ 20 ಮಂದಿ ಸಿವಿಲ್ ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.