ನವದೆಹಲಿ: 100 ಕೋಟಿ ಕೋವಿಡ್ -19 ಲಸಿಕೆ 100 ಡೋಸ್ಗಳನ್ನು ನೀಡಿದ ಭಾರತದ ಹೆಗ್ಗುರುತಿನ ಸಾಧನೆಯನ್ನು ಸಂಭ್ರಮಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಟ್ವಿಟರ್ ಹ್ಯಾಂಡಲ್ನ ಪ್ರೊಫೈಲ್ ಚಿತ್ರವನ್ನು ಬದಲಾಯಿಸಿದ್ದಾರೆ.
ಪಿಎಂ ಮೋದಿಯವರ ಪ್ರೊಫೈಲ್ ಚಿತ್ರದ ಜೊತೆಗೆ “ಅಭಿನಂದನೆಗಳು ಭಾರತ -100 ಕೋಟಿ ಕೋವಿಡ್ -19 ಲಸಿಕೆ ಡೋಸ್ ಅನ್ನು ನೀಡಲಾಗಿದೆ” ಎಂದು ಬರೆದಿದೆ.
ಪಿಎಂ ಮೋದಿ ಇಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ಸಮಯದಲ್ಲಿ ಅವರು 100 ಕೋಟಿ ಲಸಿಕೆ ಡೋಸ್ ಮೈಲಿಗಲ್ಲನ್ನು ದಾಟಿದ ಭಾರತದ ಸಾಧನೆಯ ಬಗ್ಗೆ ಶ್ಲಾಘಿಸಿದರು.
ಜಾಗತಿಕ ಮಟ್ಟದಲ್ಲೂ ಭಾರತದ ಈ ಸಾಧನೆಗೆ ಅಭಿನಂದನೆಗಳು ವ್ಯಕ್ತವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಭಾರತವನ್ನು ಶ್ಲಾಘಿಸಿದೆ.
ಟ್ವಿಟರ್ನಲ್ಲಿ ಸಕ್ರಿಯರಾಗಿರುವ ಪ್ರಧಾನಿ ನರೇಂದ್ರ ಮೋದಿ ಕೋಟ್ಯಾಂತರ ಹಿಂಬಾಲಕರನ್ನು ಹೊಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.