
ಬೆಂಗಳೂರು: ಕ್ಲಬ್ ಹೌಸ್ನ ಸಂಘದಂಗಳ ವೇದಿಕೆಯಲ್ಲಿ ಅ. 27 ರಂದು ಸಂಜೆ 7.30 ಕ್ಕೆ ‘ಮಾತೃ ಸಂಗಮ’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾತಾಜಿ ತ್ಯಾಗಮಯಿ ಶ್ರೀ ಶಾರದಾಶ್ರಮ ಚಳ್ಳಕೆರೆ ಅವರು ಆಶೀರ್ವಚನ ನೀಡಲಿದ್ದಾರೆ. ವಿಭು ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥರಾದ ಡಾ. ಆರತಿ ವಿ.ಬಿ. ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಖ್ಯಾತ ನಟಿ, ನ್ಯಾಯವಾದಿ ಮಾಳವಿಕಾ ಅವಿನಾಶ್ ಅವರು ಪ್ರಸ್ತಾವನೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇವಲ ಮಹಿಳೆಯರು ಮಾತ್ರವಲ್ಲದೆ ಪುರುಷರು ಸಹ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


