ನವದೆಹಲಿ: ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ಬಾಂಗ್ಲಾದೇಶ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಂ ಶಾಹೀನ್ ಇಕ್ಬಾಲ್ ಅವರು ಇಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾನೆ ಅವರೊಂದಿಗೆ ಮಾತುಕತೆಯನ್ನು ನಡೆಸಿದರು.
ಭಾರತ ಸರಕಾರದ ಉನ್ನತ ಶ್ರೇಣಿಯ ಅಧಿಕಾರಿಗಳೊಂದಿಗೂ ಅವರು ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ದ್ವಿಪಕ್ಷೀಯ ಸಂವಾದಗಳ ಸಮಯದಲ್ಲಿ, ಅಂತರಾಷ್ಟ್ರೀಯ ಕಡಲ ಗಡಿ ರೇಖೆಯ ಸಮನ್ವಯ ಗಸ್ತು, ದ್ವಿಪಕ್ಷೀಯ ವ್ಯಾಯಾಮ ಬೊಂಗೊಸಾಗರ್, ನೌಕಾ ತರಬೇತಿ ಮತ್ತು ನಿಯೋಗಗಳ ಪರಸ್ಪರ ಭೇಟಿಗಳಂತಹ ಜಂಟಿ ಸಹಕಾರಿ ಪ್ರಯತ್ನಗಳಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲಾಯಿತು.
ಭಾರತ ಮತ್ತು ಬಾಂಗ್ಲಾದೇಶ ಉತ್ತಮ ಬಾಂಧವ್ಯವನ್ನು ಹೊಂದಿದ್ದು, ಇದು ಜಂಟಿ ಸಮರಾಭ್ಯಾಸದಂತಹ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.