ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಶೇರ್-ಇ-ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ (ಎಸ್ಕೆಐಸಿಸಿ)ನಲ್ಲಿ ಭಾಷಣ ಮಾಡುವುದಕ್ಕೂ ಮುನ್ನ ವೇದಿಕೆಯಿಂದ ಅವರ ಬುಲೆಟ್ ಪ್ರೂಫ್ ಗ್ಲಾಸ್ ಶೀಲ್ಡ್ ಅನ್ನು ತೆಗೆಸಿದ್ದಾರೆ. ಈ ಮೂಲಕ ಅವರು ಕಾಶ್ಮೀರ ಜನತೆಗೆ ಮಹತ್ವದ ಸಂದೇಶವನ್ನು ರವಾನಿಸಿದ್ದಾರೆ.
“ನನ್ನನ್ನು ನಿಂದಿಸಲಾಯಿತು, ಖಂಡಿಸಲಾಯಿತು… ಇಂದು ನಾನು ನಿಮ್ಮೊಂದಿಗೆ ಪ್ರಾಮಾಣಿಕವಾಗಿ ಮಾತನಾಡಲು ಬಯಸುತ್ತೇನೆ, ಅದಕ್ಕಾಗಿಯೇ ಇಲ್ಲಿ ಯಾವುದೇ ಬುಲೆಟ್ ಪ್ರೂಫ್ ಅಥವಾ ಭದ್ರತೆ ನಿಯೋಜಿಸಿಲ್ಲ. ಫಾರೂಕ್ ಸಾಹಬ್ ಅವರು ಪಾಕಿಸ್ತಾನದೊಂದಿಗೆ ಮಾತನಾಡಲು ನನಗೆ ಸೂಚಿಸಿದ್ದಾರೆ ಆದರೆ ನಾನು ಯುವಕರೊಂದಿಗೆ ಮಾತನಾಡುತ್ತೇನೆ ಮತ್ತು ಕಣಿವೆಯ ಜನರೊಂದಿಗೆ ಮಾತನಾಡುತ್ತೇನೆ” ಎಂದು ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಶಾ ಅವರ ಮೂರು ದಿನಗಳ ಭೇಟಿಯ ಕೊನೆಯ ದಿನ ಇಂದು. ಆರ್ಟಿಕಲ್ 370 ರದ್ದಾದ ನಂತರ ಕೇಂದ್ರ ಗೃಹ ಸಚಿವರು ಕಣಿವೆಗೆ ನೀಡಿದ ಮೊದಲ ಭೇಟಿ ಇದಾಗಿದೆ.
ಕಾಶ್ಮೀರದಲ್ಲಿ ಉಗ್ರರ ಭೀತಿಯ ನಡುವೆಯೂ ಅವರು ಯಾವುದೇ ಬುಲೆಟ್ ಪ್ರೂಫ್ ಅಥವಾ ಭದ್ರತೆ ಇಲ್ಲದೆ ಜನರೊಂದಿಗೆ ಮಾತನಾಡಿರುವುದು ಬದಲಾದ ಕಾಶ್ಮೀರದ ಭವಿಷ್ಯದ ಬಗ್ಗೆ ಭರವಸೆಯನ್ನು ಮೂಡಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.