ಪುಲ್ವಾಮಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೋರಾದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಶಿಬಿರಕ್ಕೆ ಭೇಟಿ ನೀಡಿ ಭದ್ರತಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು ಮತ್ತು ಈ ಶಿಬಿರದಲ್ಲಿ ಅವರು ರಾತ್ರಿ ಕಳೆದರು.
ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಯೋಧರೊಂದಿಗೆ ಭೋಜನ ಮಾಡಿದರು.
“ನಾನು ಅರೆಸೈನಿಕ ಪಡೆಗಳ ಸೈನಿಕರೊಂದಿಗೆ ಸಮಯ ಕಳೆಯಲು, ಅವರನ್ನು ಭೇಟಿ ಮಾಡಲು, ಅವರ ಅನುಭವ ಮತ್ತು ಕಷ್ಟಗಳನ್ನು ತಿಳಿದುಕೊಳ್ಳಲು ಮತ್ತು ಕೆಲಸ ಮಾಡುವ ಉತ್ಸಾಹವನ್ನು ನೋಡಲು ಬಯಸುತ್ತಿದ್ದೆ. ಅದಕ್ಕಾಗಿಯೇ ನಾವು ಪುಲ್ವಾಮಾದ ಲೆಥ್ಪೋರಾ ಸಿಆರ್ಪಿಎಫ್ ಶಿಬಿರದಲ್ಲಿ ನಮ್ಮ ವೀರ ಸೈನಿಕರೊಂದಿಗೆ ಊಟ ಮಾಡಿದೆವು ಮತ್ತು ವಿಶ್ರಾಂತಿ ತೆಗೆದುಕೊಂಡೆವು. ಶಿಬಿರದಲ್ಲಿ ಸೈನಿಕರೊಂದಿಗೆ ರಾತ್ರಿ ಕಳೆದೆವು” ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಅಮಿತ್ ಶಾ ಅವರು 2019 ರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ಪಿಎಫ್) ಯೋಧರಿಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
2019 ರ ಆಗಸ್ಟ್ನಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶಕ್ಕೆ ಅಮಿತ್ ಶಾ ಅವರ ಮೊದಲ ಭೇಟಿ ಇದಾಗಿದೆ. ಅಕ್ಟೋಬರ್ 23-25 ರವರೆಗೆ ಮೂರು ದಿನಗಳ ಭೇಟಿ ನೀಡಿದ್ದಾರೆ. ಸೋಮವಾರದಂದು ಗಂದೇರ್ಬಾಲ್ ಜಿಲ್ಲೆಯ ಖೀರ್ ಭವಾನಿ ದುರ್ಗಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಭಾನುವಾರ, ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಮಕ್ವಾಲ್ ಗಡಿಯಲ್ಲಿನ ಫಾರ್ವರ್ಡ್ ಪ್ರದೇಶಗಳಿಗೆ ಭೇಟಿ ನೀಡಿದರು ಮತ್ತು ಯೋಧರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.