ಬೆಂಗಳೂರು: ಮಹಾತ್ಮಾ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಈಗಿಲ್ಲ. ಈಗಿನ ಕಾಂಗ್ರೆಸ್ ಮತ್ತು ಆಗಿನ ಕಾಂಗ್ರೆಸ್ಗೆ ಸಂಬಂಧವೇ ಇಲ್ಲ. ಈಗಿರುವ ಕಾಂಗ್ರೆಸ್ ತುಕ್ಡೇ ಗ್ಯಾಂಗ್ಗಳ ನೇತಾರರನ್ನು ನಾಯಕರನ್ನಾಗಿ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಅಸಹನೆ ಕಾಡುತ್ತಿದೆ. ತನ್ನನ್ನು ಬಿಟ್ಟು ಅಧಿಕಾರದಲ್ಲಿ ಬೇರಾರೂ ಇರಬಾರದು ಎಂಬ ಅಸಹನೆ ಅವರದ್ದು. ಬಿಜೆಪಿ ದೇಶ ವಿರೋಧಿ ವಿಚಾರ, ಭಯೋತ್ಪಾದಕರನ್ನು ಎಂದಿಗೂ ಬೆಂಬಲಿಸಿಲ್ಲ. ಚಹಾ ಮಾರುತ್ತಿದ್ದವರು ಪ್ರಧಾನಿ ಆಗಿರುವುದು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಧೈರ್ಯ ಇಲ್ಲ. ತನ್ನ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯೂ ಅದಕ್ಕಿಲ್ಲ. ಕಾಂಗ್ರೆಸ್ನದ್ದು ಕುಟುಂಬ ರಾಜಕೀಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.