ಲಕ್ನೋ: ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸುತ್ತಿರುವ ದೇಶದ್ರೋಹಿಗಳಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಪಾಕಿಸ್ಥಾನದ ಪರ ಘೋಷಣೆಗಳನ್ನು ಹಾಕಿ ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸುತ್ತಿರುವವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಅವರು ತಮ್ಮ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿ, ದೇಶದ್ರೋಹದ ಪ್ರಕರಣವನ್ನು ದಾಖಲಿಸುವಂತೆ ಸೂಚಿಸಿದ್ದಾರೆ.
ಈಗಾಗಲೇ ಉತ್ತರಪ್ರದೇಶ ಪೊಲೀಸರು ಅನೇಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ ದೇಶದ್ರೋಹದ ಪ್ರಕರಣಗಳನ್ನು ಕೂಡ ಇವರ ಮೇಲೆ ಹಾಕುವ ಸಾಧ್ಯತೆ ಇದೆ.
ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸುವಂತೆ ಎಲ್ಲಾ ಜಿಲ್ಲೆಗಳ ಎಸ್ಪಿಗಳಿಗೆ ಸೂಚನೆ ನೀಡಲಾಗಿದೆ.
ಮೂಲಗಳ ಪ್ರಕಾರ, ಪಾಕಿಸ್ಥಾನ ಜಯಗಳಿಸಿದ ಸಂದರ್ಭದಲ್ಲಿ ಉತ್ತರಪ್ರದೇಶದ ಹಲವೆಡೆ ಪಟಾಕಿಗಳನ್ನು ಸಿಡಿಸಲಾಗಿದೆ ಮತ್ತು ಪಾಕಿಸ್ಥಾನದ ಪರ ಘೋಷಣೆಗಳನ್ನು ಕೂಗಲಾಗಿದೆ. ಇದೀಗ ಇವರಿಗೆ ತಕ್ಕ ಶಾಸ್ತಿ ಮಾಡಲು ಅಲ್ಲಿನ ಸರಕಾರ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.