ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ಆರು ತಿಂಗಳ ಅವಧಿಯಲ್ಲಿ ಭಾರತದ ಕರಕುಶಲ ವಸ್ತುಗಳ ರಫ್ತು 15,995.73 ಕೋಟಿ ರೂಪಾಯಿ ತಲುಪಿದೆ ಎಂದು ಜವಳಿ ಸಚಿವಾಲಯ ತಿಳಿಸಿದೆ.
ಇದು ಕಳೆದ ವರ್ಷದ ಇದೇ ಅವಧಿಗಿಂತ ಶೇಕಡಾ 60.34 ರಷ್ಟು ಹೆಚ್ಚಿನ ಬೆಳವಣಿಗೆಯನ್ನು ಕಂಡಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಲಾಗಿದೆ..
ಕರಕುಶಲ ವಸ್ತುಗಳನ್ನು ಮಾರಾಟ ಉತ್ತೇಜಿಸಲು ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ ಸೆಂಟರ್ ಮತ್ತು ಮಾರ್ಟ್ನಲ್ಲಿ IHGF- Delhi Fair -Autumn 2021 ರ 52 ನೇ ಆವೃತ್ತಿಯನ್ನು ಗುರುವಾರ ಉದ್ಘಾಟಿಸಲಾಯಿತು. ಇದು ವ್ಯಾಪಾರ ವಹಿವಾಟು ನಡೆಸಲು ಪ್ರದರ್ಶಕರು ಮತ್ತು ಖರೀದಿದಾರರು ವೈಯಕ್ತಿಕವಾಗಿ ಭೇಟಿಯಾಗಲು ಅವಕಾಶವನ್ನು ಒದಗಿಸುತ್ತದೆ.
“ಈ ಪ್ರದರ್ಶನ ಮುಂದಿನ ದಿನಗಳಲ್ಲಿ ದೊಡ್ಡ ಮತ್ತು ಉತ್ತಮ ಆವೃತ್ತಿಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ಇದು ಭಾರತದ ಕರಕುಶಲ ವಸ್ತುಗಳ ರಫ್ತುಗಳನ್ನು ಉತ್ತೇಜಿಸುತ್ತದೆ” ಎಂದು ಕೇಂದ್ರ ವಾಣಿಜ್ಯ ಮತ್ತು ಜವಳಿ ಖಾತೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.