ನವದೆಹಲಿ: ಕನ್ನಡದ ಧೀಮಂತ ನಟ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಅದ್ಭುತ ವ್ಯಕ್ತಿತ್ವ ಎಂದು ಬಣ್ಣಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, ಮುಂಬರುವ ಪೀಳಿಗೆಗಳು ಅವರ ಕೆಲಸ ಮತ್ತು ಅದ್ಭುತ ವ್ಯಕ್ತಿತ್ವದಿಂದಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ ಎಂದು ಹೇಳಿದ್ದಾರೆ.
“ವಿಧಿಯ ಕ್ರೂರ ತಿರುವು ನಮ್ಮಿಂದ ಧೀಮಂತ ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್ಕುಮಾರ್ ಅವರನ್ನು ಕಸಿದುಕೊಂಡಿದೆ. ಇದು ಇಹಲೋಕ ತ್ಯಜಿಸುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಕಾರ್ಯ ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ.
A cruel twist of fate has snatched away from us a prolific and talented actor, Puneeth Rajkumar. This was no age to go. The coming generations will remember him fondly for his works and wonderful personality. Condolences to his family and admirers. Om Shanti. pic.twitter.com/ofcNpnMmW3
— Narendra Modi (@narendramodi) October 29, 2021
46 ವರ್ಷ ವಯಸ್ಸಿನ ಪುನೀತ್ ರಾಜ್ಕುಮಾರ್ ಅವರು ಇಂದು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಅವರ ಅಪಾರ ಅಭಿಮಾನಿ ಬಳಗ ಶೋಕಸಾಗರದಲ್ಲಿ ಮುಳುಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.