ಬೆಂಗಳೂರು: ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, “ಸಮಸ್ತ ಕನ್ನಡಿಗರಿಗೆ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡು-ನುಡಿ ರಕ್ಷಣೆಯ ಜೊತೆಗೆ ಸಮೃದ್ಧ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ!” ಎಂದಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಟ್ವೀಟ್ ಮಾಡಿ, “ಸಮಸ್ತ ಕರುನಾಡ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನು ಅವರ ಆಶಯದಂತೆ ಭಾಷೆ, ಭೂಷಣ, ಭೋಜನಗಳಲ್ಲಿ ಕನ್ನಡತನ ಮೆರೆಯೋಣ. ಕನ್ನಡಕ್ಕಾಗಿ ನಾವು ಅಭಿಯಾನವನ್ನು ನಮ್ಮ ಮಾತು ಬರವಣಿಗೆ, ವ್ಯವಹಾರಗಳಲ್ಲಿ ಪ್ರತಿ ವರ್ಷಪೂರ್ತಿ ಮುಂದುವರಿಸೋಣ” ಎಂದಿದ್ದಾರೆ.
ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ನಾಡಿನಾದ್ಯಂತ ಸಂಭ್ರಮ, ಸಂತಸ ಮನೆಮಾಡಿದೆ.
ಸಮಸ್ತ ಕನ್ನಡಿಗರಿಗೆ ೬೬ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ನಾಡು-ನುಡಿ ರಕ್ಷಣೆಯ ಜೊತೆಗೆ ಸಮೃದ್ಧ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ.
ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ! #ಕನ್ನಡರಾಜ್ಯೋತ್ಸವ pic.twitter.com/Xn0KKZSEnF— Basavaraj S Bommai (@BSBommai) November 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.