ನವದೆಹಲಿ: ಇಂದು ಕನ್ನಡಿಗರು 66ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ” ಎಂದಿದ್ದಾರೆ.
ಟ್ವೀಟ್ ಮಾಡಿರುವ ಅಮಿತ್ ಶಾ, “ಕರ್ನಾಟಕ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸಹೋದರ ಮತ್ತು ಸಹೋದರಿಯರಿಗೆ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು ಅದ್ಭುತ ಸಂಸ್ಕೃತಿ, ಖಾದ್ಯ, ಸಂಪ್ರದಾಯಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಚೆಲುವಿನ ನಾಡು ಭಾರತದ ಪ್ರಗತಿಗೆ ಸದಾ ಕೊಡುಗೆ ನೀಡುತ್ತಿರಲಿ” ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, “ಕರ್ನಾಟಕ ರಾಜ್ಯೋತ್ಸವ ಶುಭ ಸಂದರ್ಭದಲ್ಲಿ ಕನ್ನಡಿಗರಿಗೆ ಕನ್ನಡದಲ್ಲಿ ಶುಭಕೋರಿ, ಕರ್ನಾಟಕದ ಉನ್ನತಿಯ ತುಡಿತವನ್ನು ಶ್ಲಾಘಿಸಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಮುಂಬರುವ ದಿನಗಳಲ್ಲಿ ಕರ್ನಾಟಕವು ಅಭಿವೃದ್ಧಿಯ ಪಥದಲ್ಲಿ ಶರವೇಗದಲ್ಲಿ ಸಾಗಲಿದೆ; ಎಂದು ವಾಗ್ದಾನ ಮಾಡುತ್ತೇನೆ” ಎಂದಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.
— Narendra Modi (@narendramodi) November 1, 2021
ಕರ್ನಾಟಕ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸಹೋದರ ಮತ್ತು ಸಹೋದರಿಯರಿಗೆ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು ಅದ್ಭುತ ಸಂಸ್ಕೃತಿ, ಖಾದ್ಯ, ಸಂಪ್ರದಾಯಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಚೆಲುವಿನ ನಾಡು ಭಾರತದ ಪ್ರಗತಿಗೆ ಸದಾ ಕೊಡುಗೆ ನೀಡುತ್ತಿರಲಿ.
— Amit Shah (@AmitShah) November 1, 2021
#ಕರ್ನಾಟಕರಾಜ್ಯೋತ್ಸವ ಶುಭ ಸಂದರ್ಭದಲ್ಲಿ ಕನ್ನಡಿಗರಿಗೆ ಕನ್ನಡದಲ್ಲಿ ಶುಭಕೋರಿ, ಕರ್ನಾಟಕದ ಉನ್ನತಿಯ ತುಡಿತವನ್ನು ಶ್ಲಾಘಿಸಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಮುಂಬರುವ ದಿನಗಳಲ್ಲಿ ಕರ್ನಾಟಕವು ಅಭಿವೃದ್ಧಿಯ ಪಥದಲ್ಲಿ ಶರವೇಗದಲ್ಲಿ ಸಾಗಲಿದೆ; ಎಂದು ವಾಗ್ದಾನ ಮಾಡುತ್ತೇನೆ.@narendramodi https://t.co/phIOQbTt7p
— Basavaraj S Bommai (@BSBommai) November 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.