ನವದೆಹಲಿ: ಅಮೆರಿಕ ಸಂಸತ್ತಿನಲ್ಲಿ ಬೆಳಕಿನ ಹಬ್ಬವಾದ ದೀಪಾವಳಿಯ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವನ್ನು ಗುರುತಿಸಲು ಕೋರುವ ನಿರ್ಣಯವನ್ನು ಮಂಡಿಸಲಾಗಿದೆ. ಭಾರತೀಯ ಮೂಲದ ಅಮೆರಿಕನ್ ಸದಸ್ಯ ರಾಜಾ ಕೃಷ್ಣಮೂರ್ತಿಯವರು ಈ ನಿರ್ಣಯ ಮಂಡಿಸಿದ್ದಾರೆ.
“ಅಮೆರಿಕ ಮತ್ತು ಪ್ರಪಂಚದಾದ್ಯಂತ ಇರುವ ಸಿಖ್ಖರು, ಜೈನರು ಮತ್ತು ಹಿಂದೂಗಳಿಗೆ ದೀಪಾವಳಿಯು ಸಂತಸದ ಸಂದರ್ಭವಾಗಿದೆ ಮತ್ತು ಕತ್ತಲೆಯ ಮೇಲೆ ಬೆಳಕು ಮತ್ತು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯದ ಆಚರಣೆಯಾಗಿದೆ” ಎಂದು ಕೃಷ್ಣಮೂರ್ತಿ ಅವರು ನಿರ್ಣಯವನ್ನು ಮಂಡಿಸುವ ಸಂದರ್ಭದಲ್ಲಿ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ನಲ್ಲಿ ಹೇಳಿದ್ದಾರೆ.
ದೀಪಾವಳಿಯ ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವನ್ನು ಗುರುತಿಸುವ ಈ ನಿರ್ಣಯವು ಈ ಮಹತ್ವದ ಸಂದರ್ಭದಲ್ಲಿ ಭಾರತೀಯ ಅಮೆರಿಕನ್ನರು ಮತ್ತು ಪ್ರಪಂಚದಾದ್ಯಂತದ ಭಾರತೀಯ ವಲಸಿಗರಿಗೆ ಆಳವಾದ ಗೌರವವನ್ನು ವ್ಯಕ್ತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.
“ದೀಪಾವಳಿಯ ಅಗಾಧವಾದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವವನ್ನು ಗುರುತಿಸಲು ಈ ಉಭಯಪಕ್ಷೀಯ ನಿರ್ಣಯವನ್ನು ಪರಿಚಯಿಸಲು ನನಗೆ ಹೆಮ್ಮೆಯಾಗುತ್ತಿದೆ” ಎಂದು ಕೃಷ್ಣಮೂರ್ತಿ ಹೇಳಿದ್ದಾರೆ.
“ಸಾಂಕ್ರಾಮಿಕ ಸಮಯದಲ್ಲಿ ಮತ್ತೆ ದೀಪಾವಳಿಯನ್ನು ಆಚರಿಸುವ ಮೂಲಕ ಜಗತ್ತಿನ ಅಂಧಕಾರ ದೂರವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ನಮ್ಮ ಪ್ರೀತಿಪಾತ್ರರ ಜೊತೆ ಸೇರಿ ಮನೆಗಳಲ್ಲಿ ದೀಪಗಳನ್ನು ಬೆಳಗಿಸೋಣ ಮತ್ತು ಎಲ್ಲರಿಗೂ ಸುರಕ್ಷಿತ ಮತ್ತು ಸಂತೋಷದ ದೀಪಾವಳಿಯನ್ನು ನಾನು ಬಯಸುತ್ತೇನೆ. ಎಲ್ಲಾ ಜನರ ಉತ್ತಮ ಆರೋಗ್ಯ ಮತ್ತು ಶಾಂತಿಗಾಗಿ ಪ್ರಾರ್ಥಿಸುತ್ತೇನೆ, ”ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.