ನವದೆಹಲಿ: ಭಾರತದಲ್ಲಿ ಹಸಿರು ಸಾರಿಗೆಗೆ ದೊಡ್ಡ ಉತ್ತೇಜನ ಎಂಬಂತೆ, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಮುಂದಿನ ಮೂರು ವರ್ಷಗಳಲ್ಲಿ ದೇಶಾದ್ಯಂತ 10,000 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಿದೆ ಎಂದು ಇಂಡಿಯನ್ ಆಯಿಲ್ ಅಧ್ಯಕ್ಷ ಎಸ್ ಎಂ ವೈದ್ಯ ಹೇಳಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ ನಾವು 10,000 ಇವಿ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲಿದ್ದೇವೆ ಎಂದು ವೈದ್ಯ ಹೇಳಿದ್ದಾರೆ.
ಮುಂದಿನ 12 ತಿಂಗಳಲ್ಲಿ 2000 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಮತ್ತು ಮುಂದಿನ ಮೂರು ವರ್ಷಗಳಲ್ಲಿ 10,000 ಇವಿ ಚಾರ್ಜಿಂಗ್ ಸ್ಟೇಷನ್ಗಳ ಗುರಿಯನ್ನು ಸಾಧಿಸಲು ಮುಂದಿನ ಎರಡು ವರ್ಷಗಳಲ್ಲಿ ಇನ್ನೂ 8000 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.
ಮಂಗಳವಾರ, ಇಂಡಿಯನ್ ಆಯಿಲ್ ದೇಶದ 63 ನಗರಗಳಲ್ಲಿ 126 ಇಂಧನ ಕೇಂದ್ರಗಳಿಗೆ ಕ್ಲೀನರ್ ಮತ್ತು ಗ್ರೀನ್ ಡೀಸೆಲ್ ಎಕ್ಸ್ಟ್ರಾಗ್ರೀನ್ ಅನ್ನು ಹೊರತಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.