ನವದೆಹಲಿ: 2014 ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಯೋಧರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಪ್ರಧಾನಿ ನರೇಂದ್ರ ಮೋದಿ ಪಾಲಿಸಿಕೊಂಡು ಬರುತ್ತಿದ್ದಾರೆ. ಅದನ್ನು ಈ ವರ್ಷವೂ ಮುಂದುವರೆಸಲಿದ್ದಾರೆ. ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಅವರು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ರಾಜಸ್ಥಾನದ ಜೈಸಲ್ಮೇರ್ನ ಲೊಂಗೆವಾಲಾ ಗಡಿಯಲ್ಲಿ ಸೇನಾ ಯೋಧರೊಂದಿಗೆ ದೀಪ ಬೆಳಗಿಸಿ ಹಬ್ಬ ಆಚರಿಸಿದ ಪ್ರಧಾನಿ, ಈ ಬಾರಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ರಜೌರಿ ಗಡಿ ಪೋಸ್ಟ್ನ ನೌಶೇರಾಗೆ ಗುರುವಾರ ತೆರಳುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ 2019 ರಲ್ಲೂ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಸೈನಿಕರೊಂದಿಗೆ ಹಬ್ಬವನ್ನು ಆಚರಿಸಿದ್ದರು.
ಪೂಂಚ್ನಲ್ಲಿ ನಡೆಯುತ್ತಿರುವ ಎನ್ಕೌಂಟರ್ನ ಹಿನ್ನಲೆಯಲ್ಲಿ ರಾಜೌರಿಯ ನೌಶೇರಾಗೆ ಪ್ರಧಾನ ಮಂತ್ರಿಯ ಭೇಟಿ ಮಹತ್ವ ಪಡೆದುಕೊಂಡಿದೆ. ಪೂಂಚ್ ಎನ್ಕೌಂಟರ್ನ ಕೇಂದ್ರಬಿಂದುವಾ ಭಿಂಬರ್ ಗಲಿನಲ್ಲಿ ಎನ್ಕೌಂಟರ್ ಬುಧವಾರ 23 ನೇ ದಿನಕ್ಕೆ ಕಾಲಿಟ್ಟಿದೆ. ಮೋದಿ 2019 ರಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದರಯ.
ಪ್ರಧಾನಮಂತ್ರಿಯವರ ಭೇಟಿ ಯೋಧರ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ಭಯೋತ್ಪಾದಕರನ್ನು ಭಾರತಕ್ಕೆ ನುಸುಳಿಸುವ ಪಾಕಿಸ್ಥಾನದ ಪ್ರಯತ್ನವನ್ನು ಭಾರತದ ಉನ್ನತ ನಾಯಕತ್ವ ಸಹಿಸುವುದಿಲ್ಲ ಎಂಬ ಸಂದೇಶವನ್ನು ರವಾನಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.