ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸುಂಕವನ್ನು ಕಡಿತಗೊಳಿಸಿದ ಬಳಿಕ ಕರ್ನಾಟಕ ಸರ್ಕಾರ ಕೂಡ ಬೆಲೆ ಇಳಿಕೆ ಮಾಡಿದೆ. ಡೀಸೆಲ್, ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಿರುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಇಂದು ಸಾಯಂಕಾಲದಿಂದ ಹೊಸ ದರ ಅನ್ವಯವಾಗಲಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ” ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ” ಎಂದಿದ್ದಾರೆ.
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.
ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
2/3— Basavaraj S Bommai (@BSBommai) November 3, 2021
ರಾಜ್ಯ ಸರಕಾರದ ಈ ನಿರ್ದಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು.
ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ.
ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು.
3/3@CMofKarnataka— Basavaraj S Bommai (@BSBommai) November 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.