ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದ ಆವರಣದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೇ ಹಲವು ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಆದಿ ಶಂಕರಾಚಾರ್ಯ ಸಮಾಧಿಯು 2013 ರ ಉತ್ತರಾಖಂಡದ ಪ್ರವಾಹದಲ್ಲಿ ಹಾನಿಗೀಡಾದ ಬಳಿಕ ಅದನ್ನು ಪುನರ್ ನಿರ್ಮಿಸಲಾಗಿದೆ.
ಪ್ರತಿಮೆ ಉದ್ಘಾಟನೆಗೆ ಕೆಲವೇ ನಿಮಿಷಗಳ ಮೊದಲು, ಪ್ರಧಾನಿ ಅವರು ಪುರಾತನ ದೇವಾಲಯ ಕೇದಾರನಾಥದಲ್ಲಿ`ಆರತಿ` ಮಾಡಿ ಪ್ರಾರ್ಥನೆ ಸಲ್ಲಿಸಿದರು. ಕೇದಾರನಾಥನಿಗೆ ಪ್ರದಕ್ಷಿಣೆ ಹಾಕಿದರು.
ಪ್ರಧಾನಿ ಮೋದಿ ಅವರನ್ನು ಉತ್ತರಾಖಂಡದ ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ) ಮತ್ತು ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಸರಸ್ವತಿ ರಿಟೈನಿಂಗ್ ವಾಲ್ ಆಸ್ಥಾಪಥ್ ಮತ್ತು ಘಾಟ್ಗಳು, ಮಂದಾಕಿನಿ ರಿಟೈನಿಂಗ್ ವಾಲ್ ಆಸ್ಥಾಪತ್, ತೀರ್ಥ ಪುರೋಹಿತ ಮನೆಗಳು ಮತ್ತು ಮಂದಾಕಿನಿ ರಿಟೈನಿಂಗ್ ವಾಲ್, ಗರುಡ ಚಟ್ಟಿ ಸೇತುವೆ ಸೇರಿದಂತೆ 130 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.
ಪಿಎಂ ಮೋದಿ ಅವರು ಈ ರಾಜ್ಯದಲ್ಲಿ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ದೇಗುಲಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇದು ಪ್ರಧಾನಿಯಾದ ಬಳಿಕ ದೇವಾಲಯಕ್ಕೆ ಪ್ರಧಾನ ಮಂತ್ರಿಯವರ ಎರಡನೇ ಭೇಟಿಯಾಗಿದೆ. ಅವರು ಕೊನೆಯ ಬಾರಿಗೆ 2019 ರಲ್ಲಿ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.