ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಬಗ್ಗೆ ಬೊಬ್ಬೆ ಹೊಡೆಯುತ್ತಿದ್ದ ಪ್ರತಿಪಕ್ಷಗಳು ಈಗ ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡದೆ ತಪ್ಪಿಸಿಕೊಳ್ಳುತ್ತಿವೆ.
ಕೇಂದ್ರ ಸರಕಾರ ಸುಂಕವನ್ನು ಕಡಿಮೆ ಮಾಡಿದರೂ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ಜನರಿಗೆ ವಂಚನೆ ಮಾಡುತ್ತಿವೆ.
ಈ ಬಗ್ಗೆ ಪ್ರಶ್ನೆ ಮಾಡಿರುವ ಬಿಜೆಪಿ ತಮ್ಮ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡದ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ನೇತೃತ್ವದ ರಾಜ್ಯಗಳನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.
ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಮಾತನಾಡಿ, ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಬಿಜೆಪಿ ಆಡಳಿತದ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಿವೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ತಮ್ಮ ರಾಜ್ಯಗಳಲ್ಲಿ ವ್ಯಾಟ್ ಅನ್ನು ಏಕೆ ಕಡಿಮೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಸಮಸ್ಯೆಗಳಿಗೆ ಸಂವೇದನಾಶೀಲವಾಗಿದೆ ಮತ್ತು ಅವರಿಗೆ ಪರಿಹಾರ ನೀಡಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಭಾಟಿಯಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.