ನವದೆಹಲಿ: ರಾಷ್ಟ್ರವ್ಯಾಪಿಯಾಗಿ ಭಾರತ ಯಶಸ್ವಿ ಕೋವಿಡ್ ಲಸಿಕಾ ಅಭಿಯಾನವನ್ನು ಆರಂಭಿಸಿ ಮಹತ್ವದ ಸಾಧನೆಯನ್ನು ಮಾಡಿದೆ. ಇದರ ಅಡಿಯಲ್ಲಿ ಭಾರತದಲ್ಲಿ ಇದುವರೆಗೆ 108 ಕೋಟಿ 51 ಲಕ್ಷ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ.
ವಿಶ್ವದ ಅತಿದೊಡ್ಡ ಅಭಿಯಾನ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಭಾರತದ ಕೋವಿಡ್ ಲಸಿಕೆ ಅಭಿಯಾನಕ್ಕೆ ವಿಶ್ವವ್ಯಾಪಿಯಾಗಿ ಶ್ಲಾಘನೆಗಳು ವ್ಯಕ್ತವಾಗುತ್ತಿದೆ. ಕೊರೋನಾ ವಿರುದ್ಧ ಭಾರತದ ಹೋರಾಟ ಎಷ್ಟು ಪರಿಣಾಮಕಾರಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 11,451 ಹೊಸ ಪ್ರಕರಣಗಳು ವರದಿಯಾಗಿವೆ. ದಿನದಿಂದ ದಿನಕ್ಕೆ ಪ್ರಕರಣಗಳು ಕಡಿಮೆಯಾಗುತ್ತಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ.
ಚೇತರಿಕೆ ದರವು ಪ್ರಸ್ತುತ 98.24 ಪ್ರತಿಶತದಲ್ಲಿದೆ. ಕಳೆದ 24 ಗಂಟೆಗಳಲ್ಲಿ 13,200ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ, ಒಟ್ಟು ಚೇತರಿಕೆಯ ಸಂಖ್ಯೆ 3 ಕೋಟಿ 37 ಲಕ್ಷ 63 ಸಾವಿರ 104 ಕ್ಕೆ ತಲುಪಿದೆ.
ಭಾರತದ ಸಕ್ರಿಯ ಪ್ರಕರಣ ಸದ್ಯ 1 ಲಕ್ಷದ 42 ಸಾವಿರದ 826 ಆಗಿದೆ. ಇದುವರೆಗೆ 61 ಕೋಟಿ 60 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.