ನವದೆಹಲಿ: ಆರೋಗ್ಯ ವಲಯದಲ್ಲಿ ತೀರಾ ಹಿಂದುಳಿದಿರುವ 184 ಜಿಲ್ಲೆಗಳನ್ನು ಗುರುತಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿ ಉತ್ತಮ ಆರೋಗ್ಯ ಸೇವೆ, ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.
ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಪನ್ಮೂಲಗಳನ್ನು ಹೂಡಿ ಮತ್ತು ಯೋಜನೆಗಳನ್ನು ರೂಪಿಸಲಾಗುವುದು. ಬಾಣಂತಿ, ಗರ್ಭೀಣಿ ಮತ್ತು ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದಿದ್ದಾರೆ.
ಅಲ್ಲದೇ ಐದು ವರ್ಷಕ್ಕಿಂತ ಕಡಿಮೆ ವರ್ಷದ ಶಿಶುವಿನ ಮರಣ ಪ್ರಮಾಣವನ್ನು ತಗ್ಗಿಸುವ ಗುರಿಯನ್ನು ಹೊಂದಲಾಗಿದೆ ಎಂದರು.
ತೀರಾ ಬಡ ಕುಟುಂಬಗಳೂ ಆರೋಗ್ಯ ಸೌಲಭ್ಯ ಪಡೆಯಲು ಸಾಧ್ಯವಾಗುವಂತೆ ಮತ್ತು ಆರ್ಥಿಕ ಭದ್ರತೆ ಪಡೆಯುವಂತೆ ವ್ಯವಸ್ಥೆಯನ್ನು ಸಂಸ್ಥೀಕರಿಸುವ ಅಗತ್ಯ ದೇಶದಲ್ಲಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
ಆರೋಗ್ಯ ವಲಯಕ್ಕೆ ಬೇಕಾದ ಹೆಚ್ಚಿನ ಸಂಪನ್ಮೂಲವನ್ನು ಕ್ರೋಢಿಕರಿಸಲು, ಯೋಜನೆಗಳನ್ನು ರೂಪಿಸಲು ಹೆಚ್ಚಿನ ಗಮನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.