ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಒಬ್ಬ ಸಕ್ರಿಯ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕನನ್ನು ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಬಂಧಿಸಿವೆ ಎಂದು ಸೋಮವಾರ ಅನಂತನಾಗ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಭದ್ರತಾ ಪಡೆಗಳು ಆತನ ಬಳಿಯಿಂದ ಒಂದು ಪಿಸ್ತೂಲ್ ಮತ್ತು ಏಳು ಗುಂಡುಗಳನ್ನು ವಶಪಡಿಸಿಕೊಂಡಿವೆ.
ಭಯೋತ್ಪಾದಕನನ್ನು ಗಂಜಿಪೋರಾ ನಿವಾಸಿ ಹಫೀಜ್ ಅಬ್ದುಲ್ಲಾ ಮಲಿಕ್ ಎಂದು ಗುರುತಿಸಲಾಗಿದ್ದು, ಈ ವರ್ಷದ ಸೆಪ್ಟೆಂಬರ್ 25 ರಿಂದ ಈತ ಸಕ್ರಿಯ ಉಗ್ರನಾಗಿ ಕಾರ್ಯಾಚರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
“ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಐಶ್ಮುಖಮ್ನ ವಹಾದನ್ ಪ್ರದೇಶದಲ್ಲಿ ಪೊಲೀಸ್ ಮತ್ತು ಸೇನೆಯ 3RR ನ ಜಂಟಿ ಪಡೆಗಳಿಂದ ನಸುಕಿನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು” ಎಂದು ಪೊಲೀಸರು ಮಾಹಿತಿ ನೀಡಿದರು.
ಬಂಧನದ ಬಳಿಕ ಈತನನ್ನು ವಿಚಾರಣೆ ನಡೆಸಿದ ಭದ್ರತಾ ಪಡೆ ಆತ ನೀಡಿದ ಮಾಹಿತಿಯಂತೆ ಕಟ್ಸು ಅರಣ್ಯಕ್ಕೆ ಆತನನ್ನು ಕರೆದೊಯ್ದಿವೆ. ಭದ್ರತಾ ಪಡೆಗಳು ಸ್ಥಳದಿಂದ 40 ಗುಂಡುಗಳ ಜೊತೆಗೆ AK-47, 02 ಮ್ಯಾಗಜೀನ್ ಅನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.