ಬೆಂಗಳೂರು: ಕರ್ನಾಟಕವು 18,000 ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಘನತ್ಯಾಜ್ಯ ನಿರ್ವಹಣೆ, ಗ್ರಾಮೀಣ ಪ್ರದೇಶಗಳಲ್ಲಿ ಸೌರಶಕ್ತಿ ಬಳಕೆ ಕುರಿತು ತರಬೇತಿ ನೀಡಲಿದೆ.
ಬೆಂಗಳೂರು ಮೂಲದ ಮಹಾತ್ಮ ಗಾಂಧಿ ಗ್ರಾಮೀಣ ಶಕ್ತಿ ಮತ್ತು ಅಭಿವೃದ್ಧಿ ಸಂಸ್ಥೆ (MGIRED)ಯು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಸಹಯೋಗದೊಂದಿಗೆ 18,000 ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರಿಗೆ ತರಬೇತಿ ನೀಡಲಿದೆ.
ಕರ್ನಾಟಕದ ಸ್ವಸಹಾಯ ಗುಂಪುಗಳ ಗ್ರಾಮೀಣ ಮಹಿಳೆಯರು ಘನತ್ಯಾಜ್ಯ ನಿರ್ವಹಣೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೌರಶಕ್ತಿಯ ಬಳಕೆಯಂತಹ ವಿವಿಧ ಅಂಶಗಳಲ್ಲಿ ತರಬೇತಿ ಪಡಯಲಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಮಹಿಳೆಯರು ತಮ್ಮ ಸ್ಥಳೀಯ ಗ್ರಾಮ ಪಂಚಾಯತ್ಗಳಲ್ಲಿ ದಿನನಿತ್ಯದ ತ್ಯಾಜ್ಯ ಸಂಗ್ರಹಣೆ, ತ್ಯಾಜ್ಯ ವಿಂಗಡಣೆ, ಸ್ವಚ್ಛ ವಾಹಿನಿ ಚಾಲನೆ ಮುಂತಾದ ಘನತ್ಯಾಜ್ಯ ನಿರ್ವಹಣಾ ಕರ್ತವ್ಯಗಳನ್ನು ನಿರ್ವಹಿಸಲು ಸ್ವಚ್ಛಕಾರ್ಮಿಕರಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಜಲಶಕ್ತಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.