ನವದೆಹಲಿ: ಅಫ್ಘಾನಿಸ್ಥಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಅಫ್ಘಾನಿಸ್ಥಾನ ಜನರಿಗೆ ಮಾತ್ರವಲ್ಲದೆ ಅದರ ನೆರೆಯ ರಾಷ್ಟ್ರಗಳು ಮತ್ತು ಪ್ರದೇಶಕ್ಕೂ ಪ್ರಮುಖ ಪರಿಣಾಮಗಳನ್ನು ಬೀರುತ್ತದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಅಫ್ಘಾನಿಸ್ಥಾನ ಕುರಿತ ಪ್ರಾದೇಶಿಕ ಭದ್ರತಾ ಸಂವಾದದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,”ನಾವು ಅಫ್ಘಾನಿಸ್ಥಾನಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಇಂದು ಸಭೆ ನಡೆಸುತ್ತಿದ್ದೇವೆ. ನಾವೆಲ್ಲರೂ ಆ ದೇಶದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಇದು ಅಫ್ಘಾನಿಸ್ಥಾನದ ಜನರಿಗೆ ಮಾತ್ರವಲ್ಲದೆ ಅದರ ನೆರೆಹೊರೆಯವರು ಮತ್ತು ಪ್ರದೇಶಕ್ಕೂ ಪ್ರಮುಖ ಪರಿಣಾಮಗಳನ್ನು ಹೊಂದಿದೆ” ಎಂದಿದ್ದಾರೆ.
“ನಮ್ಮ ಚರ್ಚೆಗಳು ಆಫ್ಘಾನ್ ಜನರಿಗೆ ಸಹಾಯ ಮಾಡಲು ಮತ್ತು ನಮ್ಮ ಸಾಮೂಹಿಕ ಭದ್ರತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ನನಗೆ ವಿಶ್ವಾಸವಿದೆ. ಅಫ್ಘಾನಿಸ್ಥಾನದಲ್ಲಿನ ಪರಿಸ್ಥಿತಿಯ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಫ್ಘನ್ನರ ಸಾಮಾಜಿಕ ಆರ್ಥಿಕ ಪರಿಸ್ಥಿತಿಯು ಹದಗೆಡುತ್ತಿದೆ ಮತ್ತು ದೇಶವು ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹೀಗಾಗಿ ಮಾನವೀಯ ನೆರವು ಹೆಚ್ಚಿಸುವುದು ಅವಶ್ಯಕ” ಎಂದಿದ್ದಾರೆ.
ರಷ್ಯಾ ಮತ್ತು ಇರಾನ್ ಜೊತೆಗೆ ಐದು ಮಧ್ಯ ಏಷ್ಯಾದ ರಾಷ್ಟ್ರಗಳಾದ ತಜಿಕಿಸ್ಥಾನ್, ಕಿರ್ಗಿಸ್ಥಾನ್, ಕಝಾಕಿಸ್ಥಾನ್, ಉಜ್ಬೇಕಿಸ್ತಾಸ್ಥಾನ್ ಮತ್ತು ತುರ್ಕಮೆನಿಸ್ಥಾನದ ರಾಷ್ಟ್ರೀಯ ಭದ್ರತಾ ಸಲಹೆಗಾರರು ನವದೆಹಲಿಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಭಾಗವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.