ನವದೆಹಲಿ: ಇತ್ತೀಚಿಗೆ ನಡೆದ ಪ್ಯಾರ ಅಥ್ಲೇಟಿಕ್ಸ್ ಚಾಂಪಿಯನ್ಶಿಪ್ ಅವ್ಯವಸ್ಥೆಗಳ ಆಗರವಾಗಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇಲ್ಲಿಗೆ ಆಗಮಿಸಿದ್ದ ವಿಕಲಚೇತನ ಕ್ರೀಡಾಳುಗಳನ್ನು ಪ್ರಾಣಿಗಿಂತಲೂ ಕೀಳಾಗಿ ನಡೆಸಿಕೊಳ್ಳಲಾಗಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಪ್ಯಾರಾಲಿಂಪಿಕ್ ಸಮಿತಿ ಮುಖ್ಯಸ್ಥ ರಾಜೇಶ್ ತೋಮರ್ ಅವರನ್ನು ಸ್ಥಾನದಿಂದ ಅಮಾನತು ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಸಂಸ್ಥೆಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ತೋಮರ್ ಅವರನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಪ್ರಸ್ತುತ ಉಪಾಧ್ಯಕ್ಷರಾಗಿರುವವರನ್ನು ಅಧ್ಯಕ್ಷರನ್ನಾಗಿ ಮಾಡಲಾಗುತ್ತದೆ.
ಅವ್ಯವಸ್ಥೆಯ ಬಗ್ಗೆ ಇತ್ತೀಚಿಗೆ ಪ್ರತಿಕ್ರಿಯೆ ನೀಡಿದ್ದ ತೋಮರ್, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ರೀತಿಯಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದರು.
ಚಾಂಪಿಯನ್ಶಿಪ್ನಲ್ಲಿ ಕುಡಿಯುವ ನೀರು, ಆಹಾರ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ನೀಡದೆ ಪ್ಯಾರಾ ಅಥ್ಲೇಟ್ಗಳನ್ನು ಸತಾಯಿಸಲಾಗಿತ್ತು. ಇದು ಭಾರೀ ಆಕ್ರೋಶಕ್ಕೆ ತುತ್ತಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.