ಬೆಂಗಳೂರು: ಕರ್ನಾಟಕದ ವೀರವನಿತೆ ಎಂದು ಪರಿಗಣಿಸಲ್ಪಟ್ಟಿರುವ ಒನಕೆ ಓಬವ್ವ ಅವರ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವೀರವನಿತೆಗೆ ಗೌರವ ನಮನ ಸಲ್ಲಿಸಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಮೋದಿ ಓಬವ್ವಗೆ ನಮನ ಸಲ್ಲಿಸಿದ್ದು ವಿಶೇಷವಾಗಿದೆ.
ಟ್ವೀಟ್ ಮಾಡಿರುವ ಮೋದಿ, “ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದಿದ್ದಾರೆ.
ನವೆಂಬರ್ 11ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ.
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ.
— Narendra Modi (@narendramodi) November 11, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.