ನವದೆಹಲಿ: ಕೊರೋನಾವೈರಸ್ ವಿರುದ್ಧದ ಲಸಿಕಾ ಅಭಿಯಾನದಲ್ಲಿ ಭಾರತ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಇದುವರಗಿನ ವ್ಯಾಕ್ಸಿನೇಷನ್ ಕವರೇಜ್ 110 ಕೋಟಿ ದಾಟಿದೆ.
ಭಾರತದಲ್ಲಿ ಇಲ್ಲಿಯವರೆಗೆ 110 ಕೋಟಿ 27 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ನಿನ್ನೆ ಒಂದು ದಿನ 57 ಲಕ್ಷ 45 ಸಾವಿರಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಒಟ್ಟು ಲಸಿಕೆಯಲ್ಲಿ, ಮೊದಲ ಡೋಸ್ ಆಗಿ 74 ಕೋಟಿ 68 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ಗಳನ್ನು ನೀಡಲಾಗಿದ್ದು, 35 ಕೋಟಿ 58 ಲಕ್ಷಕ್ಕೂ ಹೆಚ್ಚು ಡೋಸ್ಗಳನ್ನು ಎರಡನೇ ಡೋಸ್ ಆಗಿ ನೀಡಲಾಗಿದೆ.
ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ನ ಭಾಗವಾಗಿ, ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲ ನೀಡುತ್ತಿದೆ.
ಭಾರತ ವಿಶ್ವದ ಅತೀದೊಡ್ಡ ಕೋವಿಡ್ ಲಸಿಕಾ ಅಭಿಯಾನವನ್ನು ನಡೆಸುತ್ತಿದ್ದು, ತನ್ನ ಜನಸಂಖ್ಯೆಯನ್ನು ಮಾರಕ ಸಾಂಕ್ರಾಮಿಕದಿಂದ ಪಾರು ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಮುಂದಿಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.